Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರು;11.4 ಮಿ.ಮೀ ಮಳೆ-11.38 ಲಕ್ಷ ಹಾನಿ

FB IMG 1690292244130

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರು;11.4 ಮಿ.ಮೀ ಮಳೆ-11.38 ಲಕ್ಷ ಹಾನಿ

ದಾವಣಗೆರೆ: ಜಿಲ್ಲೆಯಲ್ಲಿ ಸತತ ಮಳೆ ಆಗುತ್ತಿದ್ದು, ವರುಣ ಅಬ್ಬರಕ್ಕೆ ಮನೆ ಕುಸಿದು ಬಿದ್ದಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಬಿತ್ತನೆ ಮಾಡಿದ ಬೆಳೆಗಳಿಗೆ ಶೀತದ ವಾತಾವಣರಣ ನಿರ್ಮಾಣವಾಗಿದೆ. ಜುಲೈ 24 ರಂದು ಬಿದ್ದ ಮಳೆಯ ವಿವರದನ್ವಯ 11.4 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 11.38 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ.

ತಾಲ್ಲೂಕುವಾರು ಮಳೆ ವಿವರ; ಚನ್ನಗಿರಿ 14.8 ಮಿ.ಮೀ, ದಾವಣಗೆರೆ 6.0 ಮಿ.ಮೀ, ಹರಿಹರ 4.4 ಮಿ.ಮೀ, ಹೊನ್ನಾಳಿ 10.8 ಮಿ.ಮೀ, ಜಗಳೂರು 12.7 ಮಿ.ಮೀ, ನ್ಯಾಮತಿ 20.4 ಮಿ.ಮೀ ಮಳೆಯಾಗಿದೆ. ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 9 ಮನೆಗಳು ಭಾಗಶಃ ಹಾನಿಯಾಗಿದ್ದು ರೂ. 2.70 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ಪೂರ್ಣ ಹಾನಿಯಾಗಿದ್ದು ಹಾಗೂ 1 ಮನೆ ಭಾಗಶಃ ಹಾನಿಯಾಗಿದೆ. 1 ಜೀವ ಹಾನಿಯಾಗಿದ್ದು, ವಾರಸುದಾರರಿಗೆ 5 ಲಕ್ಷ ಪರಿಹಾರ ನೀಡಲಾಗಿದೆ.

ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿದ್ದು ರೂ. 0.13 ಸಾವಿರ ಅಂದಾಜು ನಷ್ಟ ಸಂಭವಿಸಿದೆ. ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ಭಾಗಶಃ ಹಾನಿಯಾಗಿದ್ದು ರೂ. 0.25 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ. ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ಭಾಗಶಃ ಹಾನಿಯಾಗಿದ್ದು, ರೂ. 0.40 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ಭಾಗಶಃ ಹಾನಿಯಾಗಿದ್ದು, ರೂ. 0.40 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ.

ಜಿಲ್ಲೆಯಲ್ಲಿ ಒಟ್ಟಾರೆ 11.38ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top