ದಾವಣಗೆರೆ: ಅಕ್ರಮವಾಗಿ ಗಂಧದ ಮರದ ತುಂಡು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿಗಳಿಂದ 42,000 ರೂ. ಮೌಲ್ಯದ 21 ಕೆಜಿ ಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಜು. 26ರಂದು ಜಿಲ್ಲೆಯ ಹೊನ್ನಾಳಿ ಪೊಲೀಸ್ ಠಾಣೆಯ ಪಿಎಸ್ ಐ ಸಿದ್ದಪ್ಪ ಸಿಬ್ಬಂದಿಯವರೊಂದಿಗೆ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾಸ್ಟೇಹಳ್ಳಿ ಗ್ರಾಮದಲ್ಲಿ ಗಸ್ತಿನಲ್ಲಿದ್ದಾಗ ಯಾರೋ 3 ಜನ ಆಸಾಮಿಗಳು ಗಂಧದ ಮರದ ತುಂಡುಗಳನ್ನು ಕಳ್ಳತನ ಮಾಡಿಕೊಂಡು
ಮಾರಾಟ ಮಾಡಲು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾರೆ ಅಂತ ಖಚಿತ ಮಾಹಿತಿ ಬಂದ ಮೇರೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ.ಬಸರಗಿ ಹಾಗೂ ಡಿವೈಎಸ್ಪಿ ಡಾ. ಸಂತೋಷ್ ಕೆ.ಎಂ. ಹಾಗೂ ಪೊಲೀಸ್ ನಿರೀಕ್ಷಕ ಸಿದ್ದೇಗೌಡ ಹೆಚ್.ಎಂ ಮಾರ್ಗದರ್ಶನದಲ್ಲಿ ದಾಳಿ ಮಾಡಲಾಗಿತ್ತು.
ಕುಳಗಟ್ಟೆ ಕ್ರಾಸ್ ಬಳಿ ಅಕ್ರಮವಾಗಿ ಸಾಗಾಣಿಗೆ ಮಾಡುತ್ತಿದ್ದ ಸುಮಾರು 42,000/- ರೂ ಮೌಲ್ಯದ 21 ಕೆಜಿ ಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತರಾದ 1) ಸೈಯದ್ ಅಲ್ಲಾಭಕ್ಷಿ(35),2) ಮಹಮದ್ ರಫೀಕ್ (30) 3)ನೂರುಲ್ಲಾ (36) ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳ ವಿರುದ್ಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಗಪ್ರಕರಣ ದಾಖಲಾಗಿದೆ.ಪ್ರಕರಣವನ್ನು ಪತ್ತೆ ಮಾಡಿರುವ ತಂಡಕ್ಕೆ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.



