ಡಿವಿಜಿ ಸುದ್ದಿ, ಬೆಂಗಳೂರು: ಇಂದು ದೆಹಲಿಯಲ್ಲಿ ಹೈಕಮಾಂಡ್ ಭೇಟಿಯಾಗೆ ಹೊರಟಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್, ತಮ್ಮ ದೆಹಲಿ ಪ್ರವಾಸವನ್ನು ದಿಢೀರ್ ರದ್ದು ಮಾಡಿದ್ದಾರೆ.
ಡಿ.ಕೆ ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗುವುದು ಬಹುತೇಕ ಪಕ್ಕ ಆಗಿದೆ. ನೂತನ ಅಧ್ಯಕ್ಷರ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಈ ನಿಲುವಿನಲ್ಲಿ ಹೈಕಮಾಂಡ್ ನಿರ್ಧಾರ ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ಬರುವುದು ಬೇಡ ಎಂದು ಎಐಸಿಸಿಯಿಂದ ಮಾಹಿತಿ ಬಂದ ಹಿನ್ನೆಲೆ ಡಿಕೆಶಿ ದೆಹಲಿ ಪ್ರವಸ ರದ್ದು ಮಾಡಿದ್ದಾರೆ.
ಇವತ್ತು ಮಾಜಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಲಿದ್ದಾರೆ. ವಿಪಕ್ಷ ನಾಯಕನ ಸ್ಥಾನ ಹಾಗೂ ಸಿಎಲ್‍ಪಿ ನಾಯಕನ ಸ್ಥಾನದ ಬಗ್ಗೆಯಷ್ಟೇ ಸಿದ್ದರಾಮಯ್ಯ ಜೊತೆ ಹೈಕಮಾಂಡ್ ಚರ್ಚೆ ನಡೆಸಲಿದೆ ಎನ್ನಗಾಗುತ್ತಿದೆ.ನಾಳೆಯಿಂದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ 10 ದಿನಗಳ ಕಾಲ ಇಟಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಇಟಲಿ ಪ್ರವಾಸ ಮುಗಿದ ನಂತರವೇ ವಿಪಕ್ಷ ನಾಯಕನ ಆಯ್ಕೆ, ಸಿಎಲ್‍ಪಿ ನಾಯಕನ ಆಯ್ಕೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಎಲ್ಲ ಒಟ್ಟಿಗೆ ಪ್ರಕಟವಾಗುವ ಸಾಧ್ಯತೆ ಇದೆ.