Connect with us

Dvgsuddi Kannada | online news portal | Kannada news online

ದಾವಣಗೆರೆ: ಮಕ್ಕಳನ್ನು ದಡಾರ, ರೂಬೆಲ್ಲಾದಿಂದ ಮುಕ್ತವಾಗಿಸಲು ಮೂರು ಹಂತದಲ್ಲಿ ಮಿಷನ್ ಇಂದ್ರ ಧನುಷ್ ಲಸಿಕಾಕರಣ; ಜಿಲ್ಲಾಧಿಕಾರಿ

ದಾವಣಗೆರೆ

ದಾವಣಗೆರೆ: ಮಕ್ಕಳನ್ನು ದಡಾರ, ರೂಬೆಲ್ಲಾದಿಂದ ಮುಕ್ತವಾಗಿಸಲು ಮೂರು ಹಂತದಲ್ಲಿ ಮಿಷನ್ ಇಂದ್ರ ಧನುಷ್ ಲಸಿಕಾಕರಣ; ಜಿಲ್ಲಾಧಿಕಾರಿ

ದಾವಣಗೆರೆ: ಮಕ್ಕಳನ್ನು ದಡಾರ ಮತ್ತು ರೂಬೆಲ್ಲಾದಿಂದ ಮುಕ್ತವಾಗಿಸಲು ಮುಂಬರುವ ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಮಿಷನ್ ಇಂದ್ರಧನುಷ್ ಲಸಿಕೆ ಹಾಕಲಾಗುತ್ತಿದ್ದು ಸಾರ್ವಜನಿಕರು ಅರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ.ಅವರು ಕರೆ ನೀಡಿದರು.

ಮಿಷನ್ ಇಂದ್ರಧನುಷ್-5.0 ಅನುಷ್ಟಾನ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಲಸಿಕೆಗಳು ಬಹಳ ಪ್ರಮುಖವಾಗಿದ್ದು ಲಸಿಕೆಗಳು ಮಗು ಹುಟ್ಟಿನಿಂದ 9 ತಿಂಗಳೊಳಗಾಗಿ ಎಲ್ಲಾ ಅಗತ್ಯವಿರುವ ಚುಚ್ಚುಮದ್ದುಗಳನ್ನು ಹಾಕಬೇಕು. ಮಿಷನ್ ಇಂದ್ರ ಧನುಷ್ ಲಸಿಕೆಯು ವಿವಿಧ 12 ರೋಗ ನಿರೋಧಕ ಶಕ್ತಿಗೆ ಚುಚ್ಚುಮದ್ದು ಇದಾಗಿರುತ್ತದೆ. ಯಾವುದೇ ಮಗು ಹುಟ್ಟಿನಿಂದ 1 ವರ್ಷದೊಳಗಾಗಿ ಸಿಗಬೇಕಾದ ಎಲ್ಲಾ ಲಸಿಕೆಗಳು ಸಿಗುವಂತೆ ನೋಡಿಕೊಳ್ಳಬೇಕು. ಏಕೆಂದರೆ ಈ ಅವಧಿಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಚುಚ್ಚುಮದ್ದುಗಳು ಮಗುವಿನ ಬೆಳವಣಿಗೆಯಲ್ಲಿ ಬಹಳ ಮಹತ್ವವುಳ್ಳದ್ದಾಗಿರುತ್ತದೆ. ಈ ಅವಧಿಯಲ್ಲಿ ಲಸಿಕೆ ಹಾಕಿಸಲು ಪ್ರಗತಿ ಕುಂಟಿತವಾಗುವ ಅಧಿಕಾರಿಗಳಿಗೆ ನೋಟಿಸ್ ನೀಡಲು ಸಹ ಸೂಚನೆ ನೀಡಿದರು.

ದಡಾರ-ರೂಬೆಲ್ಲಾ ನಿರ್ಮೂಲನೆಗಾಗಿ ಮಿಷನ್ ಇಂದ್ರಧನುಷ್ ಲಸಿಕೆಯನ್ನು ನೀಡಲಾಗುತ್ತಿದ್ದು ಮೊದಲ ಹಂತದಲ್ಲಿ ಬರುವ ಆಗಸ್ಟ್ 7 ರಿಂದ 12 ರ ವರೆಗೆ ನೀಡಲಾಗುತ್ತಿದೆ. ಮತ್ತು ಸೆಪ್ಟೆಂಬರ್‍ನಲ್ಲಿ 11 ರಿಂದ 16 ರ ವರೆಗೆ ಮತ್ತು ಅಕ್ಟೋಬರ್ 9 ರಿಂದ 14 ರ ವರೆಗೆ ಲಸಿಕೆಯನ್ನು ನೀಡಲಾಗುತ್ತಿದೆ. ಈ ಹಿಂದೆ ಲಸಿಕೆಯಿಂದ ಬಿಟ್ಟು ಹೋದಂತಹ ಮಕ್ಕಳು ಯಾರು ಸಹ ಹೊರಗುಳಿಯಬಾರದು. ಮಿಷನ್ ಇಂದ್ರಧನುಷ್ ಲಸಿಕೆ ಹಾಕುವ ಬಗ್ಗೆ ತಾಲ್ಲೂಕು ಮಟ್ಟದಲ್ಲಿಯೂ ಸಭೆಯನ್ನು ಮಾಡುವ ಮೂಲಕ ಇದು ಹಬ್ಬದೋಪಾದಿಯಲ್ಲಿ ಲಸಿಕಾಕರಣವಾಗುವಂತೆ ನೋಡಿಕೊಳ್ಳಬೇಕು. ದಡಾರ ಮತ್ತು ರೂಬೆಲ್ಲಾದಿಂದ ಯಾವುದೇ ಮಗು ಮರಣ ಹೊಂದಬಾರದು.

ಈ ನಿಟ್ಟಿನಲ್ಲಿ ಎಲ್ಲಾ ಮಗುವಿಗೆ ಇಂದ್ರಧನುಷ್ ತಲುಪಬೇಕು, ಇದು ಯಾವುದೇ ಜಾತಿ, ಧರ್ಮಭೇದವಿಲ್ಲದ ಎಲ್ಲಾ ಮಕ್ಕಳಿಗೆ ಹಾಕಿಸಬೇಕು, ಎಲ್ಲಿ ಸಮಸ್ಯೆ ಇದೆ ಎಂದು ಅರಿತು ಸಂಬಂಧಿಸಿದ ಮುಖಂಡರು, ಗುರುಗಳ ನೆರವನ್ನು ಪಡೆದು ಮನವರಿಕೆ ಮಾಡಿಕೊಡುವ ಮೂಲಕ ಲಸಿಕೆ ಹಾಕಲು ಮುಂದಾಗಬೇಕೆಂದು ಅಧಿಕಾರಿಗಳಿಗೆ ತಿಳಿಸಿ ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳ ಪಾತ್ರ ಬಹಳ ಪ್ರಮುಖವಾಗಿದ್ದು ಆಶಾ, ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಲು ತಿಳಿಸಿದರು.

ಜಿಲ್ಲೆಯಲ್ಲಿ 710 ಗರ್ಭಿಣಿ ತಾಯಂದಿರು, 2 ವರ್ಷದೊಳಗಿನ 3154 ಹಾಗೂ 2.5 ವರ್ಷದೊಳಗಿನ 170 ಮಕ್ಕಳಿಗೆ ಮಿಷನ್ ಇಂದ್ರಧನುಷ್ ಲಸಿಕೆಯನ್ನು ಹಾಕಲು ಗುರು ಹೊಂದಲಾಗಿದ್ದು ಇದಕ್ಕಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ತಂಡಗಳು ಹಾಗೂ ಮೊಬೈಲ್ ತಂಡಗಳನ್ನು ರಚಿಸಲಾಗಿದೆ ಎಂದು ಆರ್.ಸಿ.ಹೆಚ್.ಅಧಿಕಾರಿ ಡಾ; ಮೀನಾಕ್ಷಿ ಕೆ.ಎಸ್. ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ;ನಾಗರಾಜ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top