ದಾವಣಗೆರೆ: ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಯ ನೇಮಕಾತಿಗಾಗಿ ದ್ವಿತೀಯ ಪಿ.ಯು.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ.50, ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ, ಯುವತಿಯರಿಂದ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
27 ಜೂನ್ 2003 ರಿಂದ 27 ಡಿಸೆಂಬರ್ 2006 ರ ನಡುವೆ ಜನಿಸಿದವರಾಗಿರÀಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯದಿನ. ಆಸಕ್ತ ಅಭ್ಯರ್ಥಿಗಳು https://agnipathvayu.cdac.in ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 7406323294, 6361550016, 08192-259446 ಇಲ್ಲಿಗೆ ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ.ಡಿ. ತಿಳಿಸಿದ್ದಾರೆ.



