ದಾವಣಗೆರೆ; ಭದ್ರಾ ಜಲಾಶಯ ಪ್ರದೇಶದಲ್ಲಿನ ಮುಂಗಾರು ಬೆಳೆಗಳಿಗೆ ಇಂದು (ಆಗಸ್ಟ್ 10) ಮಧ್ಯ ರಾತ್ರಿಯಿಂದ ಎಡದಂಡೆ ಮತ್ತು ಬಲದಂಡೆ ನಾಲೆ, ಆನವೇರಿ ಶಾಖಾ ನಾಲೆ, ದಾವಣಗೆರೆ ಶಾಖಾ ನಾಲೆ, ಮಲೆಬೆನ್ನೂರು ಶಾಖಾನಾಲೆ, ಹರಿಹರ ಶಾಖಾನಾಲೆ ಮತ್ತು ಗೋದಿ ನಾಲೆಗಳಿಗೆ ನೀರು ಹರಿಸಲಾಗುತ್ತದೆ.ಆದ್ದರಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಬಿ.ಆರ್, ಪ್ರಾಜೆಕ್ಟ್ ನ ಕ.ನೀ.ನಿ.ನಿ, ಭದ್ರಾ ಯೋಜನಾ ವೃತ್ತ, ಅಧೀಕ್ಷಕ ಅಭಿಯಂತರರು ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭದ್ರಾ ಡ್ಯಾಂನಿಂದ ನಾಲೆಗೆ ನೀರು; ಕಾಲುವೆ ಬಳಿ ತಿರುಗಾಡದಂತೆ ಸಾರ್ವಜನಿಕರಿಗೆ ಎಚ್ಚರಿಕೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



