ದಾವಣಗೆರೆ: ಶಿವಮೊಗ್ಗ ಹಾಲು ಒಕ್ಕೂಟದಿಂದ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆ ಬೇರ್ಪಡಿಸಿ, ಪ್ರತ್ಯೇಕ ಹಾಲು ಒಕ್ಕೂಟವನ್ನು ದಾವಣಗೆರೆಯಲ್ಲಿ ಶೀಘ್ರದಲ್ಲೇ ಸ್ಥಾಪನೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ದಾವಣಗೆರೆಯಲ್ಲು ಪ್ರತ್ಯೇಕ ಒಕ್ಕೂಟ ರಚುದಲು ಬಿಜೆಪಿ ಅವಧಿಯಲ್ಲಿ ಯಾವುದೇ ರೀತಿಯ ಪ್ರಯತ್ನ ಆಗಲಿಲ್ಲ. ಈಗ ನಮ್ಮ ಸರ್ಕಾರ ಶೀರ್ಘವೇ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸಲಾಗುವುದು. ಇದಲ್ಲದೆ ಹಸು ಖರೀದಿಗೆ ತಲಾ 40 ಸಾವಿರ ರೂ. ಸಬ್ಸಿಡಿ ನೀಡಲಾಗುವುದು. 5ರಿಂದ 10 ಸಾವಿರ ಹಸುಗಳನ್ನು ರೈತರಿಗೆ ಕೊಡಿಸುವ ಗುರಿ ಎಂದು ತಿಳಿಸಿದರು.



