Connect with us

Dvgsuddi Kannada | online news portal | Kannada news online

ಅಮೆರಿಕಾದಲ್ಲಿ ದಾವಣಗೆರೆ ಮೂಲದ ದಂಪತಿ, ಮಗು ಸಾವು; ಪಾರ್ಥಿವ ಶರೀರವನ್ನು ಸ್ವದೇಶಕ್ಕೆ ತರುವಂತೆ ಕುಟುಂಬಸ್ಥರ ಮನವಿ

IMG 20230819 183216

ದಾವಣಗೆರೆ

ಅಮೆರಿಕಾದಲ್ಲಿ ದಾವಣಗೆರೆ ಮೂಲದ ದಂಪತಿ, ಮಗು ಸಾವು; ಪಾರ್ಥಿವ ಶರೀರವನ್ನು ಸ್ವದೇಶಕ್ಕೆ ತರುವಂತೆ ಕುಟುಂಬಸ್ಥರ ಮನವಿ

ದಾವಣಗೆರೆ: ಅಮೆರಿಕಾದಲ್ಲಿ ನೆಲೆಸಿದ್ದ ದಾವಣಗೆರೆ ಮೂಲದ ದಂಪತಿ ಹಾಗೂ ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್​ನಲ್ಲಿ ವಾಸವಾಗಿದ್ದ ಯೋಗೇಶ್ ಹೊನ್ನಾಳ್ (37), ಅವರ ಪತ್ನಿ ಪ್ರತಿಭಾ ಹೊನ್ನಾಳ್ (35), ಪುತ್ರ ಯಶ್ ಹೊನ್ನಾಳ್ (6) ಮೃತಪಟ್ಟವರು.

ದಂಪತಿಗಳು ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದ ನಿವಾಸಿಗಳಾಗಿದ್ದು, ಕುಟುಂಬದವರು ಸದ್ಯ ದಾವಣಗೆರೆಗೆ ನೆಲೆಸಿದ್ದಾರೆ. 9 ವರ್ಷಗಳ ಹಿಂದೆ ಯೋಗೇಶ್ ಹಾಗೂ ಪ್ರತಿಭಾ ಮದುವೆಯಾಗಿದ್ದು, ಉದ್ಯೋಗ ನಿಮಿತ ಅಮೆರಿಕಾದಲ್ಲಿ ನೆಲೆಸಿದ್ದರು. ಯೋಗೇಶ್ ಮತ್ತು ಅವರ ಪತ್ನಿ ಪ್ರತಿಭಾ ಇಬ್ಬರೂ ವೃತ್ತಿಯಲ್ಲಿ ಎಂಜಿನಿಯರ್​ ಆಗಿ ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದರು.‌

ಅನುಮಾನಾಸ್ಪದವಾಗಿ ಪತಿ, ಪತ್ನಿ ಹಾಗೂ ಪುತ್ರ ಸಾವನಪ್ಪಿದ್ದಾರೆ. ಮೂವರ ಸಾವಿಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ಮೃತರ ಪಾರ್ಥಿವ ಶರೀರವನ್ನು ಸ್ವದೇಶಕ್ಕೆ ತರಿಸಿಕೊಡುವಂತೆ ಮೃತರ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top