Connect with us

Dvgsuddi Kannada | online news portal | Kannada news online

ಬೆಂಗಳೂರಲ್ಲಿ ಗುಡುಗು ಸಹಿತ ಭಾರೀ ಮಳೆ; ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆ‌ ಮುನ್ಸೂಚನೆ

dvg rain

ಪ್ರಮುಖ ಸುದ್ದಿ

ಬೆಂಗಳೂರಲ್ಲಿ ಗುಡುಗು ಸಹಿತ ಭಾರೀ ಮಳೆ; ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆ‌ ಮುನ್ಸೂಚನೆ

ಬೆಂಗಳೂರು: ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ರಾಜ್ಯಕ್ಕೆ ಬೆಂಗಳೂರು ಸೇರಿದಂತೆ ವಿವಿಧ‌ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಗುಡುಗು ಸಹಿ ಧಾರಾಕಾರ ಮಳೆಯಾಗಿದ್ದು, ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಗದಗ, ಕೋಲಾರ, ಕೊಪ್ಪಳ, ರಾಯಚೂರು, ವಿಜಯನಗರ ಸೇರಿದಂತೆ ಸಿಡಿಲು, ಗುಡುಗು ಸಹಿತ ಮಳೆಯಾಗಿದೆ. ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆ ಬಂದಿದೆ.

ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್, ಜಯನಗರ, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೋರಮಂಗಲ, ಎಚ್.ಎಸ್.ಆರ್ ಲೇಔಟ್, ಬೆಳ್ಳಂದೂರು, ವರ್ತೂರು, ಸರ್ಜಾಪುರ, ಮಾರತ್ಹಳ್ಳಿ, ಕಾಡುಗೋಡಿ, ವೈಟ್ ಫೀಲ್ಡ್, ಕೆ.ಆರ್.ಪುರಂ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.

ಸೆಪ್ಟೆಂಬರ್ ನಲ್ಲಿ ನೈರುತ್ಯ ಮುಂಗಾರು ಮತ್ತೆ ಚುರುಕು ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೇಗೆ ಬೆಂಗಳೂರಿನ ರಸ್ತೆಗಳು ಜಲಾವೃತಗೊಂಡಿದ್ದು, ಕೆಲವು ಕಡೆ ಟ್ರಾಫಿಕ್​ ಜಾಮ್​ ಉಂಟಾಗಿದೆ. ಹೆಬ್ಬಾಳದಲ್ಲಿ ತಗ್ಗು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರು ಮಾತ್ರವಲ್ಲದೆ ದೊಡ್ಡಬಳ್ಳಾಪುರ, ಮಂಡ್ಯ, ಕೋಲಾರ, ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಗುರುವಾರ ಉತ್ತಮ ಮಳೆಯಾಗಿದೆ.

ಈ ಮಧ್ಯೆ, ಸೆಪ್ಟೆಂಬರ್ 2 ರಿಂದ 7 ರವೆರೆಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top