ಬೆಂಗಳೂರು: ರಾಜ್ಯದಲ್ಲಿ ಒಂದು ತಿಂಗಳು ಬಿಡುವಿನ ನಂತರ ಮತ್ತೆ ಮಳೆ ಅಬ್ಬರ ಶುರುವಾಗಿದ್ದು, ಈಗಾಗಲೇ ಎರಡು ದಿನದಿಂದ ಕೆಲ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದೆ. ಇಂದಿನಿಂದ ಸೆಪ್ಟೆಂಬರ್ 8 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಕೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನ ಕಲಬುರಗಿ, ಬೀದರ್, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಸೆಪ್ಟಂಬರ್ 3 ಮತ್ತು 4ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



