Connect with us

Dvgsuddi Kannada | online news portal | Kannada news online

ದಾವಣಗೆರೆ: ಅಶ್ಲೀಲ ವಿಡಿಯೋ ಮಾಡಿ ಯುವಕರಿಬ್ಬರು ಬ್ಲ್ಯಾಕ್ ಮೇಲ್; ಮನನೊಂದು ಯುವತಿ ಆತ್ಮಹತ್ಯೆ

death

ದಾವಣಗೆರೆ

ದಾವಣಗೆರೆ: ಅಶ್ಲೀಲ ವಿಡಿಯೋ ಮಾಡಿ ಯುವಕರಿಬ್ಬರು ಬ್ಲ್ಯಾಕ್ ಮೇಲ್; ಮನನೊಂದು ಯುವತಿ ಆತ್ಮಹತ್ಯೆ

ದಾವಣಗೆರೆ: ಅಶ್ಲೀಲ ವಿಡಿಯೋ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಬೇದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

ದಾವಣಗೆರೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಯುವಕರಿಬ್ಬರ ಬ್ಲ್ಯಾಕ್​ಮೇಲ್​​ಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದ 17 ವರ್ಷ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಶಾಲೆಗೆ ಹೋಗುವಾಗ ಪರಿಚಯವಾಗಿದ್ದ ಇಬ್ಬರು ಯುವಕರು, ಒಂದು ದಿನ ಬೇಕರಿ ತಿನಿಸಿನಲ್ಲಿ ಮತ್ತು ಬರುವ ಔಷಧಿ ಹಾಕಿ ಬಳಿಕ ಆಶ್ಲೀಲ ವಿಡಿಯೋ ಮಾಡಿಕೊಂಡಿದ್ದರು. ಬಳಿಕ ಆ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡಿದ್ದಳು.

ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಕೂಡಲೇ ಕುಟುಂಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ಇದೀಗ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಆರೋಪಿಗಳಿಗೆ ಶಿಕ್ಷೆ ಆಗಲಿ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ನೀಡಿದ್ದ ವಿಡಿಯೋ ಹೇಳಿಕೆ ದಾಖಲಿಸಿದ್ದಾಳೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top