ದಾವಣಗೆರೆ: ದಾವಣಗೆರೆ ಘಟಕದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಸೆ.13 ರಂದು ಚನ್ನಗಿರಿ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದು, ಸಾರ್ವಜನಿಕರು ತಮ್ಮ ದೂರುಗಳನ್ನು ಸಲ್ಲಿಸಬಹುದು.
ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಸೆ. 13 ರಂದು ಚನ್ನಗಿರಿ ಪ್ರವಾಸಿ ಮಂದಿರದಲ್ಲಿ, ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಾರ್ವಜನಿಕರು ಸರ್ಕಾರದ ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ಇತ್ಯರ್ಥ ಮಾಡದ ಬಗ್ಗೆ ತಮ್ಮ ದೂರು ಹಾಗೂ ಅಹವಾಲುಗಳನ್ನು ಸಲ್ಲಿಸಬಹುದು. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ, ಅಂತಹ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ.



