ಬೆಂಗಳೂರು: ಭಾರತೀಯ ಅಂಚೆ ಇಲಾಖೆಯು 6ರಿಂದ 9ನೇ ತರಗತಿಗಳಲ್ಲಿ ಓದುತ್ತಿರುವ ಶಾಲಾ ವಿದ್ಯಾರ್ಥಿಗಳಲ್ಲಿ ‘ಫಿಲಾಟೆಲಿ’ (ಅಂಚೆ ಚೀಟಿ ಸಂಗ್ರಹಣೆ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ದೀನ್ ದಯಾಳ್ ಸ್ಪರ್ಶ್ ಯೋಜನೆಯ ಸ್ಕಾಲರ್ ಶಿಪ್‌ಗೆ ಅರ್ಜಿ ಆಹ್ಪಾನಿಸಲಾಗಿದೆ.
2022-23ರ ವಾರ್ಷಿಕ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಕ್ಲಬ್ ಸದಸ್ಯರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದುಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ www.karnatakapost.gov.in ಗೆ ಅಥವಾ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡುವಂತೆ ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.