ದಾವಣಗೆರೆ: ಮಟ್ಕಾ ಜೂಜಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದು, 62,700 ರೂ. ನಗದು ಸಹಿತ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲೆಯ ಚನ್ನಗಿರಿ ತಾಲ್ಲೂಕ್ ಚಿರಡೋಣಿ ಗ್ರಾಮದ ಚಿರಡೋಣಿಯಿಂದ ಬಸವಾಪಟ್ಟಣ ಕಡೆಗೆ ಹೋಗುವ ರಸ್ತೆ ಪಕ್ಕದಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಟ್ಕಾ ಜೂಜಾಟ ನಡೆಸುತ್ತಿರುವ ಬಗ್ಗೆ ಪೊಲೀಸ್ ಅಧಿಕ್ಷಕರು ದಾವಣಗೆರೆ ರವರಿಗೆ ಮಾಹಿತಿ ಮೆರೆಗೆ ದಾಳಿ ನಡೆದಿದೆ.
ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಪ್ರಸಾದ್ ಪಿ ಮತ್ತು ಸಿಬ್ಬಂದಿಗಳಾದ ಪ್ರಕಾಶ, ನಾಗರಾಜ್, ಗೋವಿಂದರಾಜ್, ಮಲ್ಲಿಕಾರ್ಜುನ ಹಾದಿಮನಿ, ಮುತ್ತುರಾಜ್, ಶೋಭಾ, ಶಶಿಕಲಾ, ಲಿಂಗರಾಜ್ ಒಳಗೊಂಡ ತಂಡ ದಾಳಿ ನಡೆದಿದೆ. ದಾಳಿ ವೇಳೆ ಇಬ್ವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 62,700 ರೂ. ನಗದು ವಶಕ್ಕೆ ಪಡೆಯಲಾಗಿದೆ. ದಾವಣಗೆರೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾಳಿಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್ ಬಿ ಬಸರಗಿ ಪ್ರಶಂಸಿದ್ದಾರೆ.



