ದಾವಣಗೆರೆ: ಯಾವುದೇ ಸಬೂಬು ಹೇಳದೇ ನೀರಾವರಿ ಸಲಹಾ ಸಮಿತಿ ಸಭೆಯ ಆದೇಶದಂತೆ ಭದ್ರಾ ಜಲಾಶಯದಿಂದ ನಾಲೆಗೆ 100 ದಿನ ನೀರು ಹರಿಸಬೇಕು. ಕೊಟ್ಟ ಮಾತಿನಂತೆ ನೀರು ಹರಿಸದಿದ್ರೆ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಸಿದ್ದೇಶ್ವರ ಎಚ್ಚರಿಸಿದ್ದಾರೆ.
ಸರ್ಕಾರ ಕಾವೇರಿ ಮತ್ತು ಭದ್ರಾ ಜಲಾಶಯ ನೀರು ನಿರ್ವಹಣೆಯಲ್ಲಿ ತೋರುತ್ತಿರುವ ಎಡಬಿಡಂಗಿ ನಿಲುವು ತೋರುತ್ತಿದೆ. ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಭದ್ರಾ ನಾಲೆಗಳಿಗೆ 100 ದಿವಸ ನೀರು ಹರಿಸಬೇಕು. ಸಮಿತಿಯ ಆದೇಶವನ್ನು ಪಾಲಿಸಬೇಕಾಗಿರುವುದು ಅಧಿಕಾರಿಗಳ ಕರ್ತವ್ಯ. 40 ದಿನಗಳ ಕಾಲ ನೀರು ಹರಿಸಿ ನೀರು ನಿಲುಗಡೆ ಮಾಡಿರುವುದು ಖಂಡನೀಯ. ನಾಲೆಗಳಲ್ಲಿ ನೀರು ಹರಿಸಲು ತೀರ್ಮಾನ ಕೈಗೊಳ್ಳುವ ಮುನ್ನವೇ ಯೋಚನೆ ಮಾಡಬೇಕಾಗಿತ್ತು ಎಂದರು.
ರೈತರು ಈಗಾಗಲೇ ಭತ್ತದ ನಾಟಿ ಮಾಡಿ ಗೊಬ್ಬರ ಹಾಕಿದ್ದಾರೆ.ಇದಕ್ಕಾಗಿ ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. 50 ಸಾವಿರ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಭತ್ತದ ನಾಟಿ ಮಾಡಿದ್ದು, ಇನ್ನೂ ಒಂದೂವರೆ ತಿಂಗಳು ನೀರು ಹರಿಸಿದರೆ ಭತ್ತದ ಬೆಳೆ ರೈತರ ಕೈಗೆ ಸಿಗಲಿದೆ. ನೀರು ಹರಿಸದೇ ಇದ್ದರೆ ರೈತರ ಸ್ಥಿತಿ ಶೋಚನೀಯವಾಗಲಿದೆ. ಹೀಗಾಗಿ ಸರ್ಕಾರ ರೈತರ ಹಿತ ಕಾಯುವ ಕೆಲಸ ಮಾಡಬೇಕುಎಂದು ತಿಳಿಸಿದ್ದಾರೆ.
ದಾವಣಗೆರೆ: ಹೊಸ ರಾಶಿ ಅಡಿಕೆ 1, 200 ರೂ. ಏರಿಕೆ; ಹಳೆಯ ಅಡಿಕೆ 2 ಸಾವಿರ ಕುಸಿತ..!
ದಾವಣಗೆರೆ: ಮೂರು ವರ್ಷದ 30ಕ್ಕೂ ಹೆಚ್ಚು ಅಡಿಕೆ ಮರ ಕಡಿದು ಹಾಕಿದ ದುಷ್ಕರ್ಮಿಗಳು



