ಬೆಂಗಳೂರು: 2022-2023 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ 233 ಗ್ರಾಮಪಂಚಾಯಿತಿ ಮತ್ತು ವಿಶೇಷ ಗಾಂಧಿ ಗ್ರಾಮ ಪುರಸ್ಕಾರಕ್ಕೆ 4 ಗ್ರಾಮಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯಿಂದ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಜಿಲ್ಲೆಯ ಆರು ತಾಲ್ಲೂಕಿನ ತಲಾ ಒಂದೊಂದು ಗ್ರಾಮ ಪಂಚಾಯತಿ ಆಯ್ಕೆ ಮಾಡಲಾಗಿದೆ. ದಾವಣಗೆರೆ- ಮುದಹದಡಿ, ಹರಿಹರ-ಜಿಗಳಿ, ಚನ್ನಗಿರಿ- ಹಿರೇಮಳಲಿ , ಹೊನ್ನಾಳಿ- ರಾಂಪುರ , ನ್ಯಾಮತಿ-ಚೀ.ಕಡದಕಟ್ಟೆ, ಜಗಳೂರು-ಸೊಕ್ಕೆ ಗ್ರಾಮಪಂಚಾಯ್ತಿಗಳು ಪ್ರಶಸ್ತಿಗೆ ಆಯ್ಕೆಯಾಗಿವೆ.
2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಜಿಲ್ಲಾ ಮಟ್ಟದ ಗಾಂಧಿ ಗ್ರಾಮ ಪುರಸ್ಕಾರ ಆಯ್ಕೆ ಸಮಿತಿಯಲ್ಲಿ ಆಯ್ಕೆ ಮಾಡಿ ದೃಢೀಕರಿಸಿ, ಸಲ್ಲಿಸಿರುವ ಆಯ್ಕೆ ಪಟ್ಟಿಯನ್ನು ದಿನಾಂಕ:25.09.2023 ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು(ಪಂ.ರಾಜ್) ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಪರಾಮರ್ಶೆ ಸಮಿತಿ ಸಭೆಯಲ್ಲಿ ಮಂಡಿಸಿ, ಆಯ್ಕೆಯನ್ನು ಅಂತಿಮಗೊಳಿಸಲಾಗಿರುತ್ತದೆ.
ಅದರಂತೆ, 2022-23ನೇ ಸಾಲಿನ “ಗಾಂಧಿ ಗ್ರಾಮ ಪುರಸ್ಕಾರ” ಪ್ರಶಸ್ತಿಗೆ ಆಯ್ಕೆಯಾದ ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿ ಪುದಾನ ಕಾರ್ಯಕ್ರಮವನ್ನು ದಿನಾಂಕ:02.10.2023ರಂದು ಬೆಳಿಗ್ಗೆ 10.00 ಗಂಟೆಗೆ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದು, ಸದರಿ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಭಾಗವಹಿಸಿ, ಪ್ರಶಸ್ತಿ ಸ್ವೀಕರಿಸಲು ಸೂಕ್ತ ಕ್ರಮ ವಹಿಸಲು ಸಂಬಂಧಿಸಿದವರಿಗೆ ಸೂಚನೆ ನೀಡಲು ಕೋರಿದೆ.
ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಣ ಸಹಾಯಕ ಎರಡು ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ದಾವಣಗೆರೆ: ಉಚಿತ ಲ್ಯಾಪ್ ಟಾಪ್ ಪಡೆಯಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ



