ಬೆಂಗಳೂರು: ಮಾಜಿ ಸಿಎಂಗಳಾದ ನಿಜಲಿಂಗಪ್ಪ, ಎಸ್.ಆರ್. ಬೊಮ್ಮಾಯಿ ಹಾಗೂ ವೀರೇಂದ್ರ ಪಾಟೀಲ್ ಅವರ ಅವಧಿಯಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ನೀಡಲಾಗಿತ್ತು. ಆದರೆ, ಈಗಿನ ಪರಿಸ್ಥಿತಿ ಬದಲಾಗಿದ್ದು, ನಮ್ಮ ಸಮಾಜದ ಅಧಿಕಾರಿಗಳನ್ನು ಮೂಲೆ ಗುಂಪು ಮಾಡಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಬೇಸರ ವ್ಯಕ್ತಪಡಿಸಿದರು.
ಬೆಂಗಳೂರಿನ ಜಗದ್ಗುರು ರೇಣುಕಾಚಾರ್ಯ ಮಹಾವಿದ್ಯಾಲಯದ ಷರಾಫ್ ಬಸಪ್ಪ ಸಭಾಂಗಣದಲ್ಲಿ ನಡೆದ ವೀರಶೈವ ಲಿಂಗಾಯತ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ”ಪ್ರತಿಭಾ ಪುರಸ್ಕಾರ ಮತ್ತು ಪೂಜ್ಯ ಹಾನಗಲ್ ಕುಮಾರೇಶ್ವರ ಪ್ರಶಸ್ತಿ ಪ್ರದಾನ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ವೀರಶೈವ ಲಿಂಗಾಯತ ಸಮುದಾಯದ ಹಲವು ಜಾತಿಗಳ ನಡುವೆ ಒಗ್ಗಟ್ಟು ಇಲ್ಲದ ಕಾರಣ ಸಮುದಾಯದ ಅಧಿಕಾರಿಗಳನ್ನು ಮೂಲೆಗುಂಪು ಮಾಡಲಾಗುತ್ತಿದೆ. ಹೀಗಾಗಿ, ಸಮುದಾಯದ ಎಲ್ಲರೂ ಒಗ್ಗಟ್ಟಾಗಬೇಕು. ಎಲ್ಲ ಜಾತಿ ಸಮುದಾಯಗಳು ಅವರವರ ಸಮುದಾಯದ ಅಧಿಕಾರಿಗಳಿಗೆ ಉತ್ತಮ ಹುದ್ದೆ ನೀಡುತ್ತಾರೆ. ಆದರೆ, ನಮ್ಮ ಸಮುದಾಯದಲ್ಲಿ ಒಗ್ಗಟ್ಟಿಲ್ಲದ ಕಾರಣ ಮೂಲೆಗುಂಪು ಮಾಡಲಾಗಿದ್ದು, ಅನ್ಯಾಯವಾಗುತ್ತಿದೆ ಎಂದರು.
ಹೊಸನಗರದ ಮೂಲೇಗದ್ದೆಮಠ ಸದಾನಂದ ಶಿವಯೋಗಾಶ್ರಮದ ಶ್ರೀ ಚನ್ನಬಸವ ಮಹಾಸ್ವಾಮೀಜಿ, ಬಿಬಿಎಂಪಿ ಮಾಜಿ ಮೇಯರ್‌ಗಳಾದ ಗಂಗಾಂಬಿಕಾ ಮಲ್ಲಿಕಾರ್ಜನ, ಬಿ.ಎಸ್. ಪುಟ್ಟರಾಜು ಹಾಗೂ ಮಹಾಸಭಾದ ಪದಾಧಿಕಾರಿಗಳು ಸೇರಿದಂತೆ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ದಾವಣಗೆರೆ: ಭೀಕರ ದುರಂತ; ದೇವರಬೆಳಕೆರೆ ಪಿಕಪ್ ಡ್ಯಾಂನಲ್ಲಿ ಮುಳುಗಿ ತಂದೆ- ಮಗ ಸಾವು
ದಾವಣಗೆರೆ: ಮನೆ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ; ಬರೋಬ್ಬರಿ 8.16 ಲಕ್ಷ ಮೌಲ್ಯದ ಸ್ವತ್ತು ವಶ



