Connect with us

Dvgsuddi Kannada | online news portal | Kannada news online

ದಾವಣಗೆರೆ: ಭೂ ಪರಿವರ್ತನೆಗೆ 1.50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಾ. ಪಂ. ಇಒ, ಗ್ರಾ.ಪಂ ಪಿಡಿಒ

IMG 20230930 153128

ದಾವಣಗೆರೆ

ದಾವಣಗೆರೆ: ಭೂ ಪರಿವರ್ತನೆಗೆ 1.50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಾ. ಪಂ. ಇಒ, ಗ್ರಾ.ಪಂ ಪಿಡಿಒ

ದಾವಣಗೆರೆ: ಭೂ ಪರಿವರ್ತನೆಗಾಗಿ 1.50 ಲಕ್ಷ‌ ಹಣವನ್ನು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ತಾ. ಪಂ. ಇಒ, ಗ್ರಾ.ಪಂ ಪಿಡಿಒ ಬಿದ್ದಿದ್ದಾರೆ.

ಹರಿಹರ ತಾಲೂಕು ಪಂಚಾಯತ್ ಇಒ ರವಿ ಹಾಗೂ ಸಾರಥಿ ಗ್ರಾಪಂ ಪಿಡಿಒ ರಾಘವೇಂದ್ರ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ.ಹರಿಹರದ ಬಳಿಯ ಅಮರಾವತಿ ಕಾಲೋನಿಯಲ್ಲಿ ಪಿಡಿಒ ರಾಘವೇಂದ್ರ ಅವರ ನಿವಾಸದಲ್ಲಿ 1.50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಒ ರವಿ ಅವರ ನಿರ್ದೇಶನದಂತೆ ಪಿಡಿಓ ಲಂಚ ಸ್ವೀಕಾರಿಸಿದ ಹಿನ್ನೆಲೆ ರವಿ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶ್ರೀನಿವಾಸ ಟಿವಿ ಎಂಬುವರು ಹರಿಹರ ತಾಲೂಕಿನ ಸಾರಥಿ ಗ್ರಾ.ಪಂ ವ್ಯಾಪ್ತಿಯ ಕರಲಹಳ್ಳಿ ಬಳಿ ಒಂದು ಎಕರೆ ಜಮೀನು ಖರೀದಿಸಿ ಸೈಟ್ ಮಾಡಲು ಭೂ ಪರಿವರ್ತನೆಗೆ ಅರ್ಜಿ ಹಾಕಿದ್ದರು. ಇದಕ್ಕೆ ಅನುಮತಿ ನೀಡಲು ಇಒ ರವಿ 1.60 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 1.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪೂರೆ ನೇತೃತ್ವದಲ್ಲಿ ಇನ್ಸ್​​ಪೆಕ್ಟರ್ ಗಳಾದ ಮಧುಸೂದನ್, ಪ್ರಭು ಸೂರಿನ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 

ಸಾಹಿತಿಗಳಿಗೆ ಬೆದರಿಕೆ ಪತ್ರ; ಬಂಧಿತ ಆರೋಪಿ ದಾವಣಗೆರೆ ನಿವಾಸದಲ್ಲಿ ಮಹಜರ್

ದಾವಣಗೆರೆ: ರಾಶಿ ಅಡಿಕೆ ಬೆಲೆಯಲ್ಲಿ ಸ್ಥಿರತೆ:‌ ಇಂದಿನ ದರ 48,869 ರೂಪಾಯಿ

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top