ಡಿವಿಜಿ ಸುದ್ದಿ, ಚಿತ್ರದುರ್ಗ: ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆಯಬೇಕು ಎಂಬ ಸಂಚು ಒಳಗೊಳಗೆ ನಡೆಯುತ್ತಿದ್ದು, ಕೂಡಲೇ ಎಚ್ಚೆತ್ತುಕೊಂಡು ಜನಪರ ಆಡಳಿತ ನೀಡಿ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಸಲಹೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಜೆಪಿಯ ಹೈಕಮಾಂಡ್ ಸಂಸ್ಕೃತಿ ವಿರುದ್ಧ ಸಿಡಿದೇದ್ದು, ರಾಜ್ಯದ ಜನತೆಯ ಹಿತ ಕಾಪಾಡಬೇಕು. ಇಲ್ಲದಿದ್ದರೆ ನಿಮ್ಮನ್ನು ನಿಷ್ಪ್ರಯೋಜಕ ಮುಖ್ಯಮಂತ್ರಿ ಎಂಬ ಕಪ್ಪುಪಟ್ಟಿಗೆ ಸೇರಲಿದ್ದಾರೆ ಎಂದರು.
ಪ್ರಧಾನಿ ಮೋದಿ, ಕೇಂದ್ರದ ಗೃಹ ಸಚಿವ ಅಮಿತ್ ಶಾ ದಪ್ಪ ಚರ್ಮದವರು. ನೋಟು ಅಮಾನ್ಯೀಕರಣದಿಂದ ಇಲ್ಲಿವರೆಗೆ ಕೈಗೊಂಡ ಕೆಲಸಗಳು ಭಸ್ಮವಾಗುತ್ತಿದ್ದು, ಈ ಇಬ್ಬರು ನಾಯಕರು ದೇಶಕ್ಕೆ ಆಧುನಿಕ ಭಸ್ಮಾಸುರರು ಎಂದು ಹೇಳಿದರು.
ಮೋದಿ ಆಡಳಿತದಿಂದ ದೇಶದ ಆರ್ಥಿಕ ಪರಿಸ್ಥಿತಿ ದಿವಾಳಿಯತ್ತ ಸಾಗುತ್ತಿದೆ. ಇದನ್ನು ಚೇತರಿಕೆಯತ್ತ ಕೊಂಡೊಯ್ಯುವ ಬದಲು ಸಿಎಎ ಮತ್ತು ಎನ್‌ಆರ್‌ಸಿ ಕುರಿತು ಬಿಜೆಪಿಯಿಂದ ಮನೆಮನೆ ಅಭಿಯಾನ ಕೈಗೊಂಡಿದ್ದಾರೆ. ಹೀಗೆ ಮುಂದುವರೆದರೆ ಬಿಜೆಪಿ ಮುಕ್ತ ಭಾರತ ನಿರ್ಮಾಣವಾಗಲಿದೆ ಎಂದರು.



