ದಾವಣಗೆರೆ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆ(3ನೇ ಹಂತ)ಯಡಿ ಬಡ ಕುಟುಂಬಗಳ ಮಹಿಳಾ ಸಬಲೀಕರಣದ ಉದ್ದೇಶದಿಂದ ಉಚಿತ ಎಲ್.ಪಿ.ಜಿ ವಿತರಣೆ ಮಾಡಲಾಗುತ್ತದೆ.ಉಜ್ವಲ್ ಯೋಜನೆಯಡಿ ಮೂರನೇ ಹಂತದ ಎಲ್.ಪಿ.ಜಿ ಸಂಪರ್ಕ ಪಡೆಯುವ ಗ್ರಾಹಕರಿಗೆ ಎರಡು ಬರ್ನರ್ ಸ್ಟೌವ್, 14.2 ಕೆ.ಜಿ ಸಿಲಿಂಡರ್ ಮತ್ತು ಎರಡು 5 ಕೆ.ಜಿ ಸಿಲಿಂಡರ್, ಒಂದು ರೆಗ್ಯುಲೇಟರ್, ಒಂದು ಸುರಕ್ಷಾ ಹೋಸ್, ಡಿ.ಜಿ.ಸಿ.ಸಿ ಬುಕ್‍ಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು.
ಇದುವರೆಗೂ ಎಲ್.ಪಿ.ಜಿ ಅನಿಲ ಸಂಪರ್ಕಗಳನ್ನು ಹೊಂದಿರದ ಕುಟುಂಬದ ಮಹಿಳೆಯರು ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಎಲ್.ಪಿ.ಜಿ ವಿತರಕ ಕಂಪನಿಗೆ ಭೇಟಿ ನೀಡಿ ಸೌಲಭ್ಯವನ್ನು ಪಡೆಯಬಹುದು ಮತ್ತು ಕ್ಯೂ.ಆರ್.ಕೋಡ್ ಮೂಲಕ ಯೋಜನೆ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ.




