ದಾವಣಗೆರೆ: ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರು ನಮ್ಮ ಮಾವರು. ನಮ್ಮ ಮತ್ತು ಅವರ ನಡುವೆ ಹೊಂದಾಣಿಕೆ ಇದೆ. ಅದು ರಾಜಕೀಯ ಹೊಂದಾಣಿಕೆ ಅಲ್ಲ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವನ್ಯಜೀವಿ ಸಂರಕ್ಷಣಾ ಕಾಯ್ದೆ ಅನ್ವಯ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ, ಹೋರಾಟ ಮಾಡಿದವರು ನಾವೆ(ಬಿಜೆಪಿ). ಹೈಕೋರ್ಟ್ ಪ್ರಕರಣ ರದ್ದತಿ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಮುಖಂಡರು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಯಾರನ್ನೇ ನೇಮಕ ಮಾಡಿದರೂ ಸ್ವಾಗತಿಸುತ್ತೇನೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿ ಅಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಸಿ.ಟಿ.ರವಿ ಹೆಸರು ಕೇಳಿ ಬರುತ್ತಿವೆ. ವರಿಷ್ಠರು ಯಾರನ್ನೇ ಅಧ್ಯಕ್ಷರನ್ನಾಗಿ ಮಾಡಿದರೂ ಸ್ವಾಗತಿಸುತ್ತೇನೆ ಎಂದರು.



