ದಾವಣಗೆರೆ: ಪ್ರಸಕ್ತ ಸಾಲಿಗೆ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಯೋಜನೆ, ಐ.ಎಸ್.ಬಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಎಂ.ಸಿ.ಎಫ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಮತ್ತು ಭೂ ಒಡೆತನ ಯೋಜನೆಗಳಡಿ ಸೌಲಭ್ಯ ಒದಗಿಸಲಾಗುತ್ತದೆ. ನಿಗಮಗಳ ವ್ಯಾಪ್ತಿಗೆ ಒಳಪಡುವ ಜನಾಂಗದ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಸೇವಾ ಕೇಂದ್ರಗಳಲ್ಲಿ ವೆಬ್‍ಸೈಟ್ https://sevasindhu.karnaqaka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನ. 29 ಕೊನೆಯ ದಿನ.ಹೆಚ್ಚಿನ ಮಾಹಿತಿಗಾಗಿ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಸಂಪರ್ಕಿಸಲು ನಿಗಮದ ಡಿ.ಎಂ. ಪಿ. ರಮೇಶ್ ತಿಳಿಸಿದ್ದಾರೆ.



