ಡಿವಿಜಿ ಸುದ್ದಿ, ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನೆ ನಡೆಸಿದರು.
ಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಬಿಸಿಯೂಟ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ನಲ್ಲಿ ಜಮಾಯಿಸಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೆಲ ಕಾರ್ಯಕರ್ತೆಯರು ಪುಟ್ಟ ಮಕ್ಕಳನ್ನು ಮಡಿಲಲ್ಲಿ ಇಟ್ಟುಕೊಂಡು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಬೆಳಗ್ಗೆಯಿಂದ ಪ್ರತಿಭಟನೆ ಮಾಡುತ್ತಿದ್ದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದುವರೆಗೂ ಮಂತ್ರಿಗಳಾಗಲಿ, ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಪ್ರತಿಭಟನಾ ಸ್ಥಳಕ್ಕೆ ಬಂದು ಕಾರ್ಯಕರ್ತೆಯರ ಅಳಲು ಕೇಳಿಲ್ಲ.
ಯಾವುದೇ ಭರವಸೆ ನೀಡದ ಸರ್ಕಾರದ ಧೋರಣೆಗೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ನಮ್ಮ ಬೇಡಿಕೆ ಈಡೇರುವವರೆಗೂ ಸ್ಥಳದಿಂದ ಹೋಗಲ್ಲ ಎಂದು ಪಟ್ಟು ಹಿಡಿದಿದ್ದಾರೆ.