Connect with us

Dvgsuddi Kannada | online news portal | Kannada news online

ಖೇಲ್ ರತ್ನ, ಅರ್ಜುನ, ದ್ರೋಣಾಚಾರ್ಯ, ಧ್ಯಾನ್‍ಚಂದ್ ಪ್ರಶಸ್ತಿಗೆ ಅರ್ಜಿ ಆಹ್ವಾನ

indian govent

ಪ್ರಮುಖ ಸುದ್ದಿ

ಖೇಲ್ ರತ್ನ, ಅರ್ಜುನ, ದ್ರೋಣಾಚಾರ್ಯ, ಧ್ಯಾನ್‍ಚಂದ್ ಪ್ರಶಸ್ತಿಗೆ ಅರ್ಜಿ ಆಹ್ವಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2023ನೇ ಸಾಲಿನ ಮೇಜರ್ ಧ್ಯಾನ್‍ಚಂದ್ ಖೇಲ್ ರತ್ನ ಪ್ರಶಸ್ತಿ, ಅರ್ಜುನ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ, ಧ್ಯಾನ್‍ಚಂದ್ ಪ್ರಶಸ್ತಿ, ರಾಷ್ಟ್ರೀಯ ಖೇಲ್ ರತ್ನ ಪುರಸ್ಕಾರ ಮತ್ತು ಮೌಲಾನ ಅಬ್ದುಲ್ ಕಲಾಂ ಆಜಾದ್ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿಗಳನ್ನು ಕ್ರೀಡಾ ಅಭಿವೃದ್ಧಿ ಕ್ಷೇತ್ರದಲ್ಲಿ ಕ್ರೀಡಾಪಟುಗಳು, ತರಬೇತುದಾರರು, ಘಟಕಗಳು ಮತ್ತು ವಿಶ್ವವಿದ್ಯಾಲಯಗಳಿಗೆ ನೀಡಲಾಗುತ್ತಿದ್ದು, ಅರ್ಹ ಕ್ರೀಡಾಪಟುಗಳಿಂದ 2023ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಾಗಿ ಸಚಿವಾಲಯವು ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

ಆನ್‍ಲೈನ್ ಪೋರ್ಟಲ್ dbtyas-sports.gov.in ನಲ್ಲಿ ತರಬೇತುದಾರರು, ಘಟಕಗಳು ಮತ್ತು ವಿಶ್ವವಿದ್ಯಾಲಯಗಳು ಅರ್ಜಿಯನ್ನು ನ.10 ರೊಳಗಾಗಿ ಸಲ್ಲಿಸಬೇಕಾಗಿರುತ್ತದೆ.ಆನ್‍ಲೈನ್ ಅರ್ಜಿ ನಮೂನೆಯಲ್ಲಿ ಯಾವುದೇ ಸಸಮಸ್ಯೆಗಳು ಎದುರಾದರೆ, ಅರ್ಜಿದಾರರು ಕ್ರೀಡಾ ಇಲಾಖೆಯನ್ನು sportsawards-moyas@gov.in ಅಥವಾ ದೂರವಾಣಿ ಸಂಖ್ಯೆ : 011-23387432 ಮತ್ತು ಟೋಲ್ ಫ್ರೀ ಸಂಖ್ಯೆ : 1800-202-5155 ಮತ್ತು 1800-258-5155 ಗೆ ಕರೆ ಮಾಡಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top