ದಾವಣಗೆರೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯಡಿಯಲ್ಲಿ ಭತ್ತ ಮಾರಾಟಕ್ಕೆ 15ರಿಂದ ನೋಂದಣಿ ಆರಂಭವಾಗಲಿದೆ. ಜಿಲ್ಲೆಯಲ್ಲಿ 10ರಿಂದ 15 ಸಾವಿರ ಕ್ವಿಂಟಾಲ್ ಭತ್ತ ಖರೀದಿಗೆ ಅವಕಾಶವಿದ್ದು, ನ.15ರಿಂದ ಡಿ.23ರವರೆಗೆ ನೋಂದಾಯಿಸಬಹುದು. ಒಬ್ಬ ರೈತರಿಂದ 25ರಿಂದ 40 ಕ್ವಿಂಟಾಲ್ ಭತ್ತ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ವಿ. ವೆಂಕಟೇಶ್ ಹೇಳಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಭತ್ತದ ಬೆಂಬಲ ಬೆಲೆ ಖಾತರಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ಕುರಿತು ರೈತರಿಗೆ ಜಾಗೃತಿ ಮೂಡಿಸಿ, ಹೆಚ್ಚು ಪ್ರಚಾರಪಡಿಸುವ ಜೊತೆಗೆ ಭತ್ತ ಖರೀದಿ ಕೇಂದ್ರಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿವರ್ಷದಂತೆ ಈ ವರ್ಷವೂ ಸಾಮಾನ್ಯ ಭತ್ತಕ್ಕೆ 2183 ರೂ., ಎ ಗ್ರೇಡ್ ಭತ್ತಕ್ಕೆ 2203 ರೂ., ರಾಗಿಗೆ 3846 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಭದ್ರಾ ಅಚ್ಚುಕಟ್ಟು ಪ್ರದೇಶಗಳಿಗೆ ಆನ್ ಅಂಡ್ ಆಫ್ ಪದ್ಧತಿಯಿಂದ ನಾಲೆಗಳಿಗೆ ನೀರು ಹರಿಸುತ್ತಿರುವುದರಿಂದ ಉತ್ತಮ ಇಳುವರಿಯ ನಿರೀಕ್ಷೆ ಇದೆ.ದಾವಣಗೆರೆ, ಹರಿಹರ, ಹೊನ್ನಾಳಿ, ಚನ್ನಗಿರಿತಾಲೂಕಿನಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲೆಯಲ್ಲಿ 51 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ ಎಂದು ತಿಳಿಸಿದರು.
ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಸ್ಥಿರತೆ ಒದಗಿಸಲು ಹಾಗೂ ಮಾರುಕಟ್ಟೆ ಬಗ್ಗೆ ರೈತರಿಗೆ ಅರಿವು ಮೂಡಿಸಲು ಕನಿಷ್ಟ ಬೆಂಬಲ ಬೆಲೆ ಯೋಜನೆ ಅನುಷ್ಠಾನ ನೆರವಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರದ ಕನಿಷ್ಟ ಬೆಂಬಲ ಬೆಲೆ ಯೋಜನೆ ಅನುಷ್ಠಾನಕ್ಕಾಗಿ ಜಿಲ್ಲೆಯಿಂದ ಪ್ರಸ್ತಾವನೆ ಸಲ್ಲಿಸಲಾಗುವುದು. ಖರೀದಿ ಕೇಂದ್ರ ತೆರೆಯಲು ಅಗತ್ಯವಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಆದೇಶಿಸಿದರು.
ಎಪಿಎಂಸಿ ಅಧಿಕಾರಿಗಳು ಭತ್ತ ಖರೀದಿ ತಾಂತ್ರಿಕ ದೋಷಗಳ ಪರಿಹರಿಸಬೇಕು. ರೈತರಿಂದ ಕೇಂದ್ರಗಳಿಗೆ ಕಂಪ್ಯೂಟರ್, ಪೀಠೋಪಕರಣಗಳು, ಖರೀದಿಸಿದ ಭತ್ತವನ್ನು ಸಾರವರ್ಧಿತ ಅಕ್ಕಿಸಿಸಿ ಟಿವಿ ಕ್ಯಾಮೆರಾ, ರೈತರಿಂದ ಭತ್ತ ಹಾಗೂ ರಾಗಿ ತಯಾರಿಸುವ ಯಂತ್ರವನ್ನು ಅಳವಡಿಸುವ ಅಕ್ಕಿ ಖರೀದಿಸುವಾಗ ವೀಡಿಯೋ ವ್ಯವಸ್ಥೆ ಮಾಡಬೇಕು. ಗಿರಣಿಗಳಿಗೆ ಹಲ್ಲಿಂಗ್ ಮಾಡಲು ನೀಡಲಾಗುವುದು ರಾಗಿಗೆ ಬೆಂಬಲ ಬೆಲೆ ಹೆಚ್ಚಾಗಿರುವ ಕಾರಣರೈತರಲ್ಲಿ ಹೆಚ್ಚು ರಾಗಿ ಬೆಳೆಯಲು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಸಿದ್ದರಾಮ ಮಾರಿಹಾಳ್, ಎಪಿಎಂಸಿ ಕಾರ್ಯದರ್ಶಿ ಗಿರೀಶ, ಸಹಾಯಕ ನಿರ್ದೇಶಕ ಗಣೇಶ, ರೈತಮುಖಂಡರಾದ ಬಲ್ಲೂರು ರವಿಕುಮಾರ ಇತರರಿದ್ದರು.



