ದಾವಣಗೆರೆ: ಪಿಎಂ-ಅಭಿಮಾನ್ ಯೋಜನೆಯಡಿ ಪ್ರಸಕ್ತ ಸಾಲಿಗೆ ನಮ್ಮ ಕ್ಲಿನಿಕ್ ಕಾರ್ಯಕ್ರಮದಡಿ ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಗುತ್ತಿಗೆ ಆಧಾರಿತ ವೈದ್ಯಾಧಿಕಾರಿ ಹಾಗೂ ಶುಶ್ರೂಷಕಿ ಹುದ್ದೆಗೆ ಸಂಬಂಧಿಸಿದಂತೆ ರೋಸ್ಟರ್ ಹಾಗೂ ಮೆರಿಟ್ ಆಧಾರದ ಮೇಲೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳೇನಾದರು ಇದ್ದಲ್ಲಿ ಲಿಖಿತ ಪುರಾವೆಗಳೊಂದಿಗೆ ನವಂಬರ್ 23 ರೊಳಗಾಗಿ ಕಚೇರಿ ಸಲ್ಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಷಣ್ಮುಖಪ್ಪ ತಿಳಿಸಿದ್ದಾರೆ.



