ದಾವಣಗೆರೆ: 2023-24ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ., ಕೆ.ಎ.ಎಸ್., ಬ್ಯಾಂಕಿಂಗ್, ಗ್ರೂಪ್-ಸಿ, ಎಸ್.ಎಸ್.ಸಿ., ಆರ್.ಆರ್.ಬಿ. ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿಯನ್ನು ನವೆಂಬರ್ 29 ರೊಳಗೆ ಸಲ್ಲಿಸಬೇಕು. ವೆಬ್‍ಸೈಟ್ www.sw.kar.nic.in ಹಾಗೂ ಅಪರ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಧಾರವಾಡ ಜಿಲ್ಲೆ ಹಾಗೂ ಸಂಬಂಧಿಸಿದ ತಾಲ್ಲೂಕಿನ ಸಹಾಯಕ ನಿರ್ದೇಶಕರ ಸಮಾಜ ಕಲ್ಯಾಣ ಇಲಾಖೆ, ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ರವರನ್ನು ಸಂಪರ್ಕಿಸಬಹುದು.ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



