ಬೆಂಗಳೂರು: ರಾಜ್ಯದಲ್ಲಿ ನ.15 ರಿಂದ 5 ದಿನ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 15 ರಂದು ಮಳೆ ಬೀಳಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯಪುರ, ಹಾಸನ, ಬೆಳಗಾವಿ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಮೈಸೂರು, ಜಿಲ್ಲೆಯಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಇಲಾಖೆ ಪ್ರಕಾರ ನವೆಬಂರ್ 14 ರ ವೇಳೆಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನವೆಂಬರ್ 14 ಮತ್ತು 15ರಂದು ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ.