ದಾವಣಗೆರೆ; ಕೃಷಿ ಸಚಿವ ಚಲುವರಾಯಸ್ವಾಮಿ ಇಂದು ( ನ.22) ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಶಿರಡಿ ಸಾಯಿಬಾಬಾ ದೇವಸ್ಥಾನದ ಪ್ರಾರಂಭೋತ್ಸವದಲ್ಲಿ ಭಾಗವಹಿಸಿ ಮಧ್ಯಾಹ್ನ 1.30ರಿಂದ ಜಗಳೂರು, ದಾವಣಗೆರೆ ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡುವರು.
ಮಧ್ಯಾಹ್ನ 3.30ಕ್ಕೆ ಜಿಪಂ ಸಭಾಂಗಣದಲ್ಲಿ ದಾವಣಗೆರೆ, ಹಾವೇರಿ ಮತ್ತು ಚಿತ್ರದುರ್ಗ ಜಿಲ್ಲೆ ಕೃಷಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ 4.30ಕ್ಕೆ ಪತ್ರಿಕಾಗೋಷ್ಠಿ ನಡೆಸುವರು. ಸಂಜೆ 5 ಗಂಟೆಗೆ ಪಕ್ಷದ ಕಚೇರಿಗೆ ಭೇಟಿ ಕಾರ್ಯಕರ್ತರ ಅಹವಾಲುಗಳ ಆಲಿಸುವರು.



