ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ, ವಿಶ್ವವಿದ್ಯಾನಿಲಯ, ದೃಶ್ಯಕಲಾ ಮಹಾವಿದ್ಯಾಲಯಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ಯುವ ಜನೋತ್ಸವ ಆಯ್ಕೆ ಪ್ರಕ್ರಿಯೆ ನವಂಬರ್ 29 ರಂದು ನಗರದ ವಿದ್ಯಾನಗರದಲ್ಲಿರುವ ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯ ಆಯೋಜಿಸಲಾಗಿದೆ.
ಯುವಜನೋತ್ಸವ ಆಯ್ಕೆ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಸ್ಪರ್ಧೆಗಳು ನಡೆಯಲಿದ್ದು, 15 ರಿಂದ 29 ವರ್ಷ ವಯೋಮಿತಿಯೊಳಗಿನ ಎಲ್ಲಾ ಯುವಜನರು ಭಾಗವಹಿಸಬಹುದಾಗಿದೆ. ಭಾಗವಹಿಸುವ ಸ್ಪರ್ಧಾಳುಗಳು ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ನಕಲು ಮತ್ತು ಆಧಾರ್ಕಾರ್ಡ್ನ ನಕಲು ಪ್ರತಿ, ಜನನ ಪ್ರಮಾಣ ಪತ್ರ ತರತಕ್ಕದ್ದು. ಆಯ್ಕೆಯಾದವರು ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಥವಾ ದೂ.ಸಂ: 08192-237480 ಸಂಪರ್ಕಿಸಲು ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀಬಾಯಿ ತಿಳಿಸಿದ್ದಾರೆ.



