ದಾವಣಗೆರೆ: ಕಾಲೇಜು ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೆಟಿಜೆ ನಗರ ಪೊಲೀಸರು ಬಂಧಿಸಿದ್ದಾರೆ.15 ಸಾವಿರ ಬೆಲೆಯ ಗಾಂಜಾ ವಶಕ್ಕೆ ಪಡೆಯಲಾಗಿದೆ
ನಗರದ ಹದಡಿ ರಸ್ತೆಯಲ್ಲಿರುವ ಸರ್ಕಾರಿ ಐಟಿಐ ಕಾಲೇಜು ಕ್ರೀಡಾಂಗಣದ ಒಳಭಾಗದಲ್ಲಿ ಆಟೋದಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದವರ ಮೇಲೆ ದಾಳಿ ಮಾಡಿ ಬಂಧಿಸಲಾಗಿದೆ. ಹಾವೇರಿ ನಗರದ ಚಾಲಕ ಗಗನ್ ಆನವಟ್ಟಿ (26) ಹಾಗೂ ರಾಣೇಬೆನ್ನೂರು ತಾಲೂಕಿನ ಸುಜಲ್ ಎಸ್. ಜೈನ್ (21) ಬಂಧಿತ ಆರೋಪಿಗಳು.ಆರೋಪಿತರ ಬಳಿ ಇದ್ದ ಸುಮಾರು 15 ಸಾವಿರ ರೂಪಾಯಿ ಮೌಲ್ಯದ 490 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 15,000 ರೂ. ಬೆಲೆಯ ಆಟೋರಿಕ್ಷಾ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.
ಕೆಟಿಜೆ ನಗರ ಠಾಣೆಯ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ದಾವಣಗೆರೆ ನಗರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಮಲ್ಲೇಶ ಡಿ, ಕೆಟಿಜೆ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಶಶಿಧರ ಯು. ಜೆ. ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಸಾಗರ್ ಅತ್ತರವಾಲ ರವರ ಸಾರಧ್ಯದಲ್ಲಿ ಕೆಟಿಜೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು.
ಪ್ರಕರಣ ಪತ್ತೆಯಲ್ಲಿ ಯಶಸ್ವಿಯಾದ ದಾವಣಗೆರೆ ನಗರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಮಲ್ಲೇಶ ಡಿ., ಕೆಟಿಜೆ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಶಶಿಧರ, ಪಿಎಸ್‌ಐ (ಕಾ&ಸು) ಸಾಗರ್ ಅತ್ತರವಾಲ & ಕೆಟಿಜೆ ನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿ ಶಂಕರ್ ಜಾಧವ್, ಪ್ರಕಾಶ್ ಮಂಜಪ್ಪ ಎಂ, ಷಣ್ಮುಖ.ಕೆ, ಶಿವರಾಜ ಎಂ.ಎಸ್. ರವಿ.ಎಂ, ಹರೀಶ್.ಡಿ. ಅವರನ್ನು ಎಸ್ಪಿ ಉಮಾ ಪ್ರಶಾಂತ್ ಹಾಗೂ ಎಸ್ಪಿ ವಿಜಯಕುಮಾರ ಎಂ. ಸಂತೋಷ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.



