ದಾವಣಗೆರೆ: ತಡ ರಾತ್ರಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಹುಂಡಿ ಒಡೆದು, ಅದರಲ್ಲಿ ಹಣವನ್ನು ದೋಚಿ ಪರಾರಿಯಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪೆನ್ನಸಮುದ್ರ ಗ್ರಾಮದ ಮಹಾರುದ್ರಸ್ವಾಮಿ ದೇವಾಲಯದಲ್ಲಿ ನಡೆದಿದೆ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವಸ್ಥಾನ ಪ್ರವೇಶದ್ವಾರ ಬೀಗ ಮುರಿದ ಕಳ್ಳತನ ಮಾಡಿದ್ದು, ಹುಡಿಯನ್ನು ಒಡೆದು ಹಣ ದೋಚಿ ಪರಾರಿಯಾಗಿದ್ದಾರೆ. ಕಳ್ಳತನದ ದೃಶ್ಯ ದೇವಾಲಯದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನಾ ಸ್ಥಳಕ್ಕೆ ದಾವಣಗೆರೆ ಶ್ವಾನದಳ ಸೇರಿದಂತೆ ಬೆರಳಚ್ಚು ತಜ್ಞರು ಧಾವಿಸಿ ಪರಿಶೀಲನೆ ನಡೆಸಿದರು. ಪರಿಶೀಲನೆ ಬಳಿಕ ಚನ್ನಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹುಂಡಿಯಲ್ಲಿ ಐದು ಲಕ್ಷಕ್ಕಿಂತ ಹೆಚ್ಚು ಹಣ ಇತ್ತು ಎಂದು ಗ್ರಾಮಸ್ಥರು ಅಂದಾಜಿಸಿದ್ದಾರೆ.



