ನವದೆಹಲಿ: ದೇಶದಾದ್ಯಂತ ಭಾರೀ ಪ್ರತಿಭಟನೆ,ಆಕ್ರೋಶಕ್ಕೆ ಕಾರಣವಾಗಿದ್ದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಕಾನೂನಿಗೆ ಸಂಬಂಧಿಸಿದ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರಕ್ಕೆ 4 ವಾರಗಳ ಗಡುವು ನೀಡಿದೆ.
ಅಸ್ಸಾಂ ಮತ್ತು ತ್ರಿಪುರಗಳಲ್ಲಿ ಸಿಎಎ ಸಮಸ್ಯೆ ದೇಶದ ಇತರ ಭಾಗಗಳಿಗಿಂತ ಭಿನ್ನವಾಗಿರುವುದರಿಂದ ಈ ಎರಡು ರಾಜ್ಯಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಪ್ರತ್ಯೇಕವಾಗಿ ತಗೆದುಕೊಳ್ಳಾಗುವುದು ಎಂದು ಕೋರ್ಟ್ ತಿಳಿಸಿದೆ.
ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಈ ತೀರ್ಪು ನೀಡಿದೆ. ಪೌರತ್ವ ಕಾನೂನಿನ ಕುರಿತು ಸಲ್ಲಿಕೆಯಾಗಿರುವ 140 ಅರ್ಜಿಗಳಿಗೆ ಮಧ್ಯಂತರ ಆದೇಶ ನೀಡಲಿದೆ. ಆಗಲೂ ಕೂಡ ಕೇಂದ್ರ ಸರ್ಕಾರ ಕೇಳದೆಯೇ ಪೌರತ್ವ ಕಾನೂನಿಗೆ ಯಾವುದೇ ತಡೆ ನೀಡಲಾಗುವುದಿಲ್ಲ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ
ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಇಂದು ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದರು. ಅದರಲ್ಲಿ ಬಹುತೇಕ ಸಿಎಎ ಮಾನ್ಯತೆ ರದ್ದು ಕೋರಿ ಅರ್ಜಿಗಳಿದ್ದವು. ಕೇಂದ್ರ ಸರ್ಕಾರದ ಪರವಾಗಿ ಹಾಜರಾಗಿದ್ದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಅರ್ಜಿಗಳ ಪರವಾಗಿ ವಾದ ಮಂಡಿಸಿದರು.
.