ನವದೆಹಲಿ: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಮತ್ತೆ ದುಬಾರಿಯಾಗಿದೆ. ಇಂದಿನಿಂದ (ಡಿ.1) 19 ಕೆಜಿ ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 21 ರೂ. ಹೆಚ್ಚಳ ಮಾಡಲಾಗಿದೆ.
ಬೆಲೆ ಏರಿಕೆ ಬಳಿಕ ದೆಹಲಿಯಲ್ಲಿ 19 ಕೆಜಿ ಎಲ್ಪಿಜಿ ಸಿಲಿಂಡರ್ 1775.50 ರೂ.ಗಳ ಬದಲು 1796.50 ರೂ.ಗೆ ಲಭ್ಯವಿದೆ. ಕೋಲ್ಕತ್ತಾದಲ್ಲಿ, ಇದು 1885.50 ರ ಬದಲು 1908.00 ನಲ್ಲಿ ಲಭ್ಯವಿರುತ್ತದೆ. ಆದರೆ ಮುಂಬೈನಲ್ಲಿ 1728.00 ರ ಬದಲು 1749 ರೂ. ಚೆನ್ನೈನಲ್ಲಿ ಈಗ 1942.00 ರೂ.ಗಳ ಬದಲು 1968.50 ರೂ.ಗೆ ಏರಿದೆ.
ತೈಲ ಕಂಪನಿಗಳು ಪ್ರತಿ ತಿಂಗಳು 1ರಂದು ದರ ಪರಿಷ್ಕರಣೆ ಮಾಡುತ್ತವೆ. ಹೀಗಾಗಿ 19 ಕೆಜಿ ವಾಣಿಜ್ಯ ಸಿಲಿಂಡರ್ ನಲ್ಲಿ ಈ ಹೆಚ್ಚಳ ಮಾಡಲಾಗಿದೆ. ದೇಶೀಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಹೆಚ್ಚಳ ಮಾಡಲಾಗಿಲ್ಲ.