ದಾವಣಗೆರೆ: ಉದ್ಯೋಗ ಹುಡುಕುತ್ತಿರುವ ಯುವಕ ಯುವತಿಯರಿಗೆ ಇದೇ ಶನಿವಾರ ಡಿಸೆಂಬರ್ 23ರಂದು ಜಗಳೂರಿನಲ್ಲಿ ಆಯೋಜಿಸಿರುವ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದ್ದು, ಯುವ ಸಮೂಹ ಇದರ ಸದುಪಯೋಗ ಪಡೆದುಕೊಳ್ಳಬಹುದು.
ಜಿ ಮಲ್ಲಿಕಾರ್ಜುನಪ್ಪ ಮತ್ತು ಶ್ರೀಮತಿ ಹಾಲಮ್ಮ ಚಾರಿಟಿ ಫೌಂಡೇಶನ್ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು ಜಗಳೂರಿನ ನಳಂದ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಡಿಸೆಂಬರ್ 23ನೇ ಶನಿವಾರದಂದು ಆಯೋಜಿಸಲಾಗಿದೆ. ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಇಂಜಿನಿಯರಿಂಗ್( ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಕೆಮಿಕಲ್), ಎಂಬಿಎ ಮುಗಿಸಿದ ವಿದ್ಯಾರ್ಥಿಗಳು ಈ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ದಾವಣಗೆರೆ ನಗರದ ಪ್ರತಿಷ್ಠಿತ ಜಿಎಂಐಟಿ ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಸಹಾಯದಿಂದ ನಡೆಯುವ ಈ ಬೃಹತ್ ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚಿನ ಕಂಪನಿಗಳು ಭಾಗವಹಿಸಲಿದ್ದು, 5 ಸಾವಿರಕ್ಕೂ ಅಧಿಕ ಉದ್ಯೋಗವಕಾಶಗಳು ಲಭ್ಯವಿದೆ ಎಂದು ಉದ್ಯೋಗಾಧಿಕಾರಿ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತಿಯುಳ್ಳ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳು ಮತ್ತು ಸ್ವ ವಿವರದೊಂದಿಗೆ ಕನಿಷ್ಠ ಐದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಕಡ್ಡಾಯವಾಗಿ ತರತಕ್ಕದ್ದು, ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. 23ನೇ ಶನಿವಾರದಂದು ಬೆಳಗ್ಗೆ 9ಕ್ಕೆ ಆವರಣದಲ್ಲಿ ಹಾಜರಿರಬೇಕಾಗಿ ವಿನಂತಿಸಲಾಗಿದೆ.
ಮೇಳದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಈ ಕೆಳಗೆ ಕೊಟ್ಟಿರುವ ಲಿಂಕ್ ಮೂಲಕ ತಮ್ಮ ಸ್ವ ವಿವರವನ್ನು ನೋಂದಾಯಿಸ ತಕ್ಕದ್ದು. https://forms.gle/BN5KqYfovodCXzAQ8 ಹೆಚ್ಚಿನ ಮಾಹಿತಿಗೆ 7619647531 /9739977710 ಈ ನಂಬರ್ ಗೆ ಸಂಪರ್ಕಿಸಿ.