ದಾವಣಗೆರೆ: ಕಲ್ಯಾಣ ಕರ್ನಾಟಕ ಪ್ರದೇಶದ ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ 454 ಹುದ್ದೆಗಳ ನೇಮಕಾತಿ ಸಂಬಂಧ ಇಂದು (ಡಿ.10) ದಾವಣಗೆರೆ ನಗರದ ವಿವಿಧ 07 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿದ್ದು, ಎಸ್ಪಿ ಉಮಾ ಪ್ರಶಾಂತ್ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪರೀಕ್ಷಾ ಸಂಬಂಧ ಕರ್ತವ್ಯದಲ್ಲಿದ್ದ ಅಧಿಕಾರಿ ಸಿಬ್ಬಂದಿಗಳಿಗೆ ಸೂಕ್ತ ಕರ್ತವ್ಯ ಸೂಚನೆಗಳನ್ನು ನೀಡಿದರು.
ದಾವಣಗೆರೆ ನಗರದ ವಿವಿಧ 07 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿದ್ದು, ದಾವಣಗೆರೆ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಹಂಚಿಕೆಯಾಗಿದ್ದ ಒಟ್ಟು 3740 ಪರೀಕ್ಷಾ ಅಭ್ಯರ್ಥಿಗಳಲ್ಲಿ 2474 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 1266 ಅಭ್ಯರ್ಥಿಗಳು ಗೈರಾಗಿದ್ದರು.



