ದಾವಣಗೆರೆ; ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಜಾರಿಗೊಳಿಸುಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಹೊರಟಿದ್ದ ಮಾದಿಗ ದಂಡೋರ ಸಮಿತಿ ಸದಸ್ಯರ ಬಸ್ ಅಪಘಾತಕ್ಕೆ ಒಳಾಗಿದೆ. ಲಾರಿಯೊಂದು ಡಿಕ್ಕಿಹೊಡೆದಿದ್ದು, ಚಾಲಕ ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ದಾವಣಗೆರೆ ನಗರದ ಹೊರವಲಯದ ಜಿಲ್ಲಾ ಪಂಚಾಯಿತ್ ಎದುರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ, ಚಿಂತಾಮಣಿ ಸೇರಿದಂತೆ ವಿವಿಧ ಕಡೆಗಳಿಂದ ಮೂರು ಬಸ್ಗಳಲ್ಲಿ ಮಾದಿಗ ದಂಡೋರ ಸಮಿತಿ ಸದಸ್ಯರು ಬೆಳಗಾವಿ ಅಧಿವೇಶನಕ್ಕೆ ಹೊರಟಿದ್ದರು. ಮೂರು ಬಸ್ಸುಗಳಲ್ಲಿ ಒಂದು ಬಸ್ಸಿಗೆ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿದೆ. ಬಸ್ ಮುಂಭಾಗ ಸಂಪೂರ್ಣ ಹಾನಿಯಾಗಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗದ ವರದಿ ಜಾರಿಗೆ ನಿರ್ಧಾರ ತೆಗೆದುಕೊಳ್ಳುವಂತೆ ಆಗ್ರಹಿಸಲು ಬೆಳಗಾವಿಗೆ ತೆರಳುತ್ತಿದ್ದರು. ನಗರದ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.