ದಾವಣಗೆರೆ: ಬೆಂಗಳೂರಿನ ಐಟಿಸಿ ಗಾರ್ಡೇನಿಯ ಹೋಟೆಲ್ ನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಜಿಎಂಐಟಿ ಕಾಲೇಜಿಗೆ ಅಕಾಡೆಮಿಕ್ ಎಕ್ಸಲೆನ್ಸ್ ಅವಾರ್ಡ್ ಮತ್ತು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ತೇಜಸ್ವಿ ಕಟ್ಟಿಮನಿ ಅವರಿಗೆ ಬೆಸ್ಟ್ ಅಕಾಡೆಮಿಕ್ ಕೋಆರ್ಡಿನೇಟರ್ ಅವಾರ್ಡ್ ಲಭಿಸಿದೆ.
ICT ಅಕಾಡೆಮಿಯು ರಾಜ್ಯ ಸರ್ಕಾರಗಳು ಮತ್ತು ಕೈಗಾರಿಕೆಗಳ ಸಹಯೋಗದೊಂದಿಗೆ ಭಾರತ ಸರ್ಕಾರದ ಉಪಕ್ರಮವಾಗಿದೆ. ICT ಅಕಾಡೆಮಿ ಲಾಭ ರಹಿತ ಸಂಸ್ಥೆಯಾಗಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಜಂಟಿ ಉದ್ಯಮವಾಗಿದೆ. ಇತ್ತೀಚೆಗೆ ನಡೆದ ಐಸಿಟಿ ಅಕಾಡೆಮಿ ಬ್ರಿಡ್ಜ್ -2023 ಕಾರ್ಯಕ್ರಮದಲ್ಲಿ ಜಿಎಂ ತಾಂತ್ರಿಕ ಮಹಾವಿದ್ಯಾಲಯಕ್ಕೆ ಅಕಾಡಮಿಕ್ ಎಕ್ಸಲೆನ್ಸ್ ಪ್ರಶಸ್ತಿ ಮತ್ತು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ತೇಜಸ್ವಿ ಕಟ್ಟಿಮನಿ ಅವರಿಗೆ ಕೋಆರ್ಡಿನೇಟರ್ ಪ್ರಶಸ್ತಿ ನೀಡಿ ಗೌರವಿಸಿದೆ. ಕಾಲೇಜಿನ ವಿದ್ಯಾರ್ಥಿಗಳಿಗೆ ಅನೇಕ ರೀತಿಯ ತರಬೇತಿ ಕಾರ್ಯಕ್ರಮಗಳನ್ನು ನೀಡುತ್ತಿದ್ದು, ವಿದ್ಯಾರ್ಥಿಗಳ ಸರ್ವತೋನ್ಮುಖ ಬೆಳವಣಿಗೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಅಪಾರವಾದ ಮೆಚ್ಚುಗೆಯನ್ನು ಕಾರ್ಯಕ್ರಮದಲ್ಲಿ ವ್ಯಕ್ತಪಡಿಸಲಾಯಿತು.
ಪ್ರಶಸ್ತಿ ಸಮಾರಂಭದಲ್ಲಿ ಜಿಎಂಐಟಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಕೆ. ದಿವ್ಯಾನಂದ, ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ತೇಜಸ್ವಿ ಕಟ್ಟಿಮನಿ ಟಿ ಆರ್, ರೋಬೋಟಿಕ್ಸ್ ಅಂಡ್ ಆಟೋಮೇಷನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ರಾಜಕುಮಾರ್ ಡಿಜಿ, ಜಿಎಂಎಸ್ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಸಂಯೋಜಕ ಪ್ರೊ. ಪ್ರಮೋದ್, ಪ್ರೊ. ಸಚಿನ್, ಜಿಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಪ್ರೊ ಅಶೋಕ್, ಪ್ರೊ. ಯಾಸ್ಮಿನ್, ಪ್ಲೇಸ್ಮೆಂಟ್ ಸಂಯೋಜಕ ಆಕಾಶ್ ಗೌಡ ಉಪಸ್ಥಿತರಿದ್ದರು.
ಪ್ರಶಸ್ತಿ ವಿಜೇತ ತೇಜಸ್ವಿ ಕಟ್ಟಿಮನಿ ಟಿ ಆರ್ ಮತ್ತು ಕಾಲೇಜಿನ ಪ್ರಾಂಶುಪಾಲ ಡಾ. ಸಂಜಯ್ ಪಾಂಡೆ ಎಂಬಿ, ಎಲ್ಲಾ ಅಧ್ಯಾಪಕ ವರ್ಗದವರಿಗೂ ಕಾಲೇಜಿನ ಆಡಳಿತ ಮಂಡಳಿಯ ಚೇರ್ಮನ್ ಜಿಎಂ ಲಿಂಗರಾಜು ಮತ್ತು ಆಡಳಿತ ಅಧಿಕಾರಿ ವೈ.ಯು. ಸುಭಾಷ್ ಚಂದ್ರ ಅಭಿನಂದನೆ ತಿಳಿಸಿದ್ದಾರೆ.



