ದಾವಣಗೆರೆ: ಗಣಿ, ಭೂ ವಿಜ್ಞಾನ ಇಲಾಖೆ ಸಚಿವರ ಹೆಸರು ದುರುಪಯೋಗ ಮಾಡಿಕೊಂಡು ಹೊನ್ನಾಳಿ ತಾಲ್ಲೂಕಿನ ಕೋಟೆಹಾಳು ಹಾಗೂ ಹರಪನಹಳ್ಳಿ ತಾಲ್ಲೂಕಿನ ಹಲುವಾಗಿಲು ಗ್ರಾಮಗಳ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಗೆ ನಡೆಸಬೇಕು ಎಂದು ಭ್ರಷ್ಟಾಚಾರ ವಿರೋಧಿ ವೇದಿಕೆ ವತಿಯಿಂದ ಜಿಲ್ಲಾ ಭೂ ವಿಜ್ಞಾನ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಹೊನ್ನಾಳಿ ತಾಲ್ಲೂಕಿನ ಕೋಟೆಹಾಳು ಗ್ರಾಮಸ್ಥರು, ಭೂ ವಿಜ್ಞಾನ ಇಲಾಖೆ ಸಚಿವರ ಹೆಸರು ದುರುಪಯೋಗ ಮಾಡಿಕೊಂಡು, ಕೋಟೆಹಾಳು ಹಾಗೂ ಹರಪನಹಳ್ಳಿ ತಾಲ್ಲೂಕು ಹಲುವಾಗಿಲು ಗ್ರಾಮಗಳ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸಿದ್ದಾರೆ ಎಂದು ವೇದಿಕೆ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಗಣಿ ಮತ್ತುವಭೂ ವಿಜ್ಞಾನ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸುವುದಾಗಿ ಪ್ರತಿಭಟನಕಾರರು ತಿಳಿಸಿದರು.
ಈ ಬಗ್ಗೆ ಇಲಾಖೆಗೆ ಮನವಿ ಸಲ್ಲಿಸಿದ್ದರೂ, ನಮ್ಮ ಮನವಿಗೆ ಸ್ಪಂದಿಸಿಲ್ಲ. ಪ್ರಕೃತಿಗೆ ಧಕ್ಕೆ ಆಗುವ ರೀತಿ ಗಣಿಗಾರಿಕೆ ನಡೆಸಿದ್ದು, ಮರಳು ತೆಗೆದ ಬಳಿಕ ಗುಂಡಿಗಳನ್ನು ಮುಚ್ಚಿಲ್ಲ. ಇದರಿಂದ ಅಪಾಯ ಸಂಭವಿಸುವ ಸಾಧ್ಯತೆ ಇದೆ. ಹಲವಾಗಿಲು ನದಿ ಪಾತ್ರದಲ್ಲಿ ಮರಳು ಗಣಿಗಾರಿಕೆಗೆ ಅನುಮತಿ ಪಡೆದಿದ್ದರೇ? ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.