Connect with us

Dvgsuddi Kannada | online news portal | Kannada news online

ದಾವಣಗೆರೆ ಬೆಣ್ಣೆ ದೋಸೆಗೆ ರಾಷ್ಟ್ರಮಟ್ಟದಲ್ಲಿ ಬ್ರ್ಯಾಂಡ್ ಮಾಡುವ ಗುರಿ; ಜಿಲ್ಲಾಧಿಕಾರಿ

n56800163417033806176086561ba725330119d68cc8489c26f637e9f3d905ff17c36eaca0ba68968af37eb

ದಾವಣಗೆರೆ

ದಾವಣಗೆರೆ ಬೆಣ್ಣೆ ದೋಸೆಗೆ ರಾಷ್ಟ್ರಮಟ್ಟದಲ್ಲಿ ಬ್ರ್ಯಾಂಡ್ ಮಾಡುವ ಗುರಿ; ಜಿಲ್ಲಾಧಿಕಾರಿ

ದಾವಣಗೆರೆ: ದಾವಣಗೆರೆ ಬೆಣ್ಣೆ ದೋಸೆಯನ್ನು ರಾಷ್ಟ್ರಮಟ್ಟದಲ್ಲಿ ಜನಪ್ರಿಯಗೊಳಿಸಲು ಸಾಂಪ್ರದಾಯಿಕತೆ ಹಾಗೂ ಗುಣಮಟ್ಟ ಕಾಪಾಡಿಕೊಂಡು ಬ್ರ್ಯಾಂಡ್ ಮಾಡುವುದು ದೋಸೋತ್ಸವದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.

ನಗರದ ಎಂ.ಬಿ.ಎ ಮೈದಾನ ಮತ್ತು ಗ್ಲಾಸ್ ಹೌಸ್ ಮುಂಭಾಗದಲ್ಲಿ ಆಯೋಜಿಸಲಾದ ದೋಸೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದಾವಣಗೆರೆ ಬೆಣ್ಣೆ ದೋಸೆ ಇತಿಹಾಸ ಪ್ರಸಿದ್ಧವಾಗಿದ್ದು, ರಾಷ್ಟ್ರೀಯ ಮಟ್ಟದಲ್ಲಿ ದೋಸೆಯನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಡಿಸೆಂಬರ್ 25 ರವರೆಗೆ ದೋಸೋತ್ಸವ ಏರ್ಪಡಿಸಲಾಗಿದೆ. ಕಳೆದ ನಾಲ್ಕು ದಶಕಗಳಿಂದ ಬೆಣ್ಣೆ ದೋಸೆ ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರ ಮುಖಾಂತರ ಸಾರ್ವಜನಿಕರಿಗೆ ಗುಣಮಟ್ಟದ ಬೆಣ್ಣೆ ದೋಸೆಯನ್ನು ತಲುಪಿಸುವಲ್ಲಿ ಜಿಲ್ಲಾಡಳಿತ ಸಫಲವಾಗಿದೆ ಎಂದರು.

ನಗರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯಕ್ರಮ ನಡೆಯುತ್ತಿದ್ದು ಬಂದಂತಹ ಜನರಿಗೆ ಬೆಣ್ಣೆ ದೋಸೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಈ ಸಂಧರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದಾವಣಗೆರೆಯ ಗರಿಗರಿ ಬೆಣ್ಣೆ ದೋಸೆಯನ್ನು ಸವಿದು ಆನಂದಿಸಬಹುದಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಎಂ. ಸಂತೋಷ್, ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ. ಅಶ್ವತ್ ಎಂ.ಬಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಷಣ್ಮುಖಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಶಿದ್ರಾಮ್ ಮಾರಿಹಾಳ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top