ಬೆಂಗಳೂರು: ರಾಜ್ಯದಲ್ಲಿ ಮುಂದಿನ 2 ದಿನ ಚಳಿ ಹೆಚ್ಚಳವಾಗಲಿದ್ದು, ವಿಜಯಪುರದಲ್ಲಿ 10.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ ತಾಪಮಾನ ಇನ್ನೂ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಕುಸಿತ ಆಗುವ ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡಿನ ಚಿಕ್ಕಮಗಳೂರಿನಲ್ಲೂ ಚಳಿಯ ವಾತಾವರಣ ಮುಂದುವರೆಯಲಿದೆ.ಬೆಂಗಳೂರು, ಮೈಸೂರು ಭಾಗದಲ್ಲೂ ಚಳಿ ಮುಂದುವರೆದಿದ್ದು, ಮುಂದಿನ ವಾರವೂ ಚಳಿ ಇರಲಿದೆ. ಬಾಗಲಕೋಟೆಯಲ್ಲಿ 15.3 ಡಿಗ್ರಿ ಸೆಲ್ಸಿಯಸ್, ಕಲಬುರಗಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 15.6 ಡಿಗ್ರಿ ಸೆಲ್ಸಿಯಸ್, ಗದಗದಲ್ಲಿ 15.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿತ್ತು. ಮುಂದಿನ ದಿನಗಳಲ್ಲಿ ಇನ್ನೂ ಕಡಿಮೆಯಾಗುವ ನಿರೀಕ್ಷೆ ಇದೆ.ಡಿ.25 ರಾತ್ರಿಯೊಳಗೆ ರಾಜ್ಯದ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಮಾಹಿತಿ ನೀಡಿದೆ.



