ಡಿವಿಜಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ವಿದೇಶಿ ಪ್ರವಾಸ ಮುಗಿಸಿ ಬಂದ ನಂತರ ಎರಡ್ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ ಅಂತಾ ಹೇಳಲಾಗುತ್ತಿತ್ತು. ಆದರೆ , ಈಗ ಇನ್ನು ಒಂದಿಷ್ಟು ದಿನ ಸಚಿವ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ.
ಸಿಎಂ ಯಡಿಯೂರಪ್ಪ ಸೋಮವಾರ ದೆಹಲಿಗೆ ಹೋಗುತ್ತಾರೆ ಅಂತ ಹೇಳಲಾಗುತ್ತಿತ್ತು. ಆದರೆ, ಈಗ ಸಿಎಂ ಸೋಮವಾರ ದೆಹಲಿಗೆ ಹೋಗುವುದು ಡೌಟ್ ಅಂತಾ ಗೊತ್ತಾಗಿದೆ. ಹೀಗಾಗಿ 2 ದಿನ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮೈಸೂರು, ಮಂಡ್ಯ , ಹಾಸನ ಜಿಲ್ಲೆಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ

ದಿನದಿಂದ ದಿನಕ್ಕೆ ಸಂಪುಟ ವಿಸ್ತರಣೆ ಮುಂದೂಡುತ್ತಿರುವುದರಿಂದ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಆತಂಕ ಮನೆ ಮಾಡಿದೆ. ಅದರಲ್ಲೂ ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ಬರಲು ಕಾರಣವಾಗಿದ್ದ 17 ಶಾಸಕರಲ್ಲಿ 6 ಜನರಿಗೆ ಅಷ್ಟೇ ಸಚಿವ ಸ್ಥಾನ ಎಂದು ಹೇಳಲಾಗುತ್ತಿದೆ. ಇದರಿಂದ 17 ಶಾಸಕರಲ್ಲಿ ಇನ್ನಷ್ಟು ಆತಂಕ ಹೆಚ್ಚಾಗಿದೆ. ಇನ್ನು ಬಿಜೆಪಿಯಲ್ಲಿ ಸಚಿವ ಸ್ಥಾನಕಕ್ಕಾಗಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಈ ಎಲ್ಲವನ್ನು ಮುಖ್ಯಮಂತ್ರಿಯಡಿಯೂರಪ್ಪ ಯಾವ ರೀತಿ ನಿರ್ವಹಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.



