ಡಿವಿಜಿ ಸುದ್ದಿ, ಹರಪನಹಳ್ಳಿ: ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನೆಗಳು ಸಹಕಾರಿಯಾಗಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಿಣಾಭಿವೃದ್ಧಿ ಸಂಸ್ಥೆಯ ಮೇಲ್ವಿಚಾರಕ ಅಧಿಕಾರಿ ಮಂಜುನಾಥ್ ತಿಳಿಸಿದರು.
ತಾಲ್ಲೂಕಿನ ಉಚ್ಚoಗಿದುರ್ಗದ ಚತ್ರುದಶಿ ವಿಶ್ರಾಂತಿ ಗೃಹದಲ್ಲಿ ನಡೆದ ಉಚ್ಚoಗಿದುರ್ಗ ಬಿಸಿ ವಲಯದ ಒಕ್ಕೂಟದ ಸಭೆಯನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ಮಹಿಳೆಯರು ತಮ್ಮ ಕುಟುಂಬ ವ್ಯವಹಾರಕ್ಕೆ ಸ್ವಸಹಾಯ ಸಂಘಗಳ ಮೂಲಕ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಜೊತೆಗೆ ಮಹಿಳೆಯರು ತಮ್ಮ ಮನೆಯಲ್ಲಿ ಉಪಯೋಗಿಸುವ ವಸ್ತುಗಳನ್ನು ತಯಾರಿಸುವ ತರಬೇತಿಯನ್ನು ಸಂಸ್ಥೆ ನೀಡುತ್ತಿದೆ. ಇದರಿಂದ ಮಹಿಳೆಯರು ಹಾಗೂ ಅವರ ಕುಟುಂಬ ಆರ್ಥಿಕವಾಗಿ ಸ್ವಾವಲಂಬನೆಯಾಗಲು ಸಂಸ್ಥೆಯ ಯೋಜನೆಗಳು ಸಹಕಾರಿಯಾಗಿವೆ ಎಂದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಒಕ್ಕೂಟದ ಅಧ್ಯಕ್ಷೆ ವಾಣಿಶ್ರೀ, ಕಾರ್ಯದರ್ಶಿ ಬೇಬಿ, ಸೇವಾ ಪ್ರತಿನಿಧಿ ಸಂತೋಷ, ಸುಷ್ಮಾ, ಹಾಗೂ ಮಹಿಳಾ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು.