34 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಸರ್ಕಾರ ಆದೇಶ; ಯಾರಿಗೆಲ್ಲ ಸಿಕ್ಕಿದೆ..? ಸಂಪೂರ್ಣ ವಿವರ ಇಲ್ಲಿದೆ..

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಂದು 9 ತಿಂಗಳ ಬಳಿಕ ಕೊನೆಗೂ ನಿಗಮ – ಮಂಡಳಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 34 ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶಿಸಿದ್ದಾರೆ.ಮೊದಲ ಪಟ್ಟಿಯಲ್ಲಿ 34 ಶಾಸಕರಿಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳವ ನಿಟ್ಟಿನಲ್ಲಿ ಸರ್ಕಾರ ನಿಗಮ-ಮಂಡಳಿ ಅಸ್ತ್ರವನ್ನು ಬಿಟ್ಟಿತ್ತು. ಆದರೆ, ಇಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವಿನ ಭಿನ್ನಾಭಿಪ್ರಾಯದಿಂದ ಪಟ್ಟಿ ಬಿಡುಗಡೆ ವಿಳಂಬವಾಗಿತ್ತು. ಈ ಸಂಬಂಧ ಕಾಂಗ್ರೆಸ್‌ ಹೈಕಮಾಂಡ್‌ ನಾಲ್ಕೈದು ಬಾರಿ ಸಭೆ ನಡೆಸಿ ಒಮ್ಮತ ಮೂಡಿಸಲು ಪ್ರಯತ್ನ ಮಾಡಿತ್ತು. ಕೊನೆಗೂ ಗಣರಾಜ್ಯೋತ್ಸವ ದಿನವಾದ ಶುಕ್ರವಾರ (ಜ.26) ನಿಗಮ ಮಂಡಳಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.ಈಗ ಬಿಡುಗಡೆ ಮಾಡಲಾಗಿರುವ ಪಟ್ಟಿಯಲ್ಲಿ ಅಧಿಕಾರದ ಅವಧಿ 2 ವರ್ಷ ಎಂದು ಉಲ್ಲೇಖ ಮಾಡಲಾಗಿದೆ.

ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದು, ಈ ಕೆಳಕಂಡವರಿಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆದೇಶ ಹೊರಡಿಸಲಾಗಿದೆ ಅಂತ ಹೇಳಿದ್ದಾರೆ.

ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಪಟ್ಟಿ

  • ಹಂಪನಗೌಡ ಬಾದರ್ಲಿ – ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
  • ಅಪ್ಪಾಜಿ ಸಿಎಸ್ ನಾಡಗೌಡ – ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್
  • ಭರಮಗೌಡ ಅಲಗೌಡ ಕಾಗೆ – ಹುಬ್ಬಳ್ಳಿ ಸಾರಿಗೆ ನಿಗಮ
  • ಯಮುನಪ್ಪ ವೈ ಮೇಟಿ – ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
  • ಎಸ್ ಆರ್ ಶ್ರೀನಿವಾಸ್ – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
  • ಬಸವರಾಜ್ ನೀಲಪ್ಪ ಶಿವಣ್ಣನವರ್ – ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ
  • ಬಿಜಿ ಗೋವಿಂದಪ್ಪ – ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
  • ಹೆಚ್ ಸಿ ಬಾಲಕೃಷ್ಣ – ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
  • ಜಿಎಸ್ ಪಾಟೀಲ್ – ಕರ್ನಾಟಕ ಖನಿಜ ನಿಗಮ ಅಭಿವೃದ್ಧಿ ನಿಯಮಿತ
  • ಎನ್ ಎ ಹ್ಯಾರೀಸ್ – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
  • ಕೌಜಲಗಿ ಮಹಾಂತೇಶ್ ಶಿವಾನಂದ – ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
  • ಪುಟ್ಟರಂಗಶೆಟ್ಟಿ – ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್
  • ಜೆಟಿ ಪಾಟೀಲ್ – ಹಟ್ಟಿ ಚಿನ್ನದಗಣಿ
  • ರಾಜಾ ವೆಂಕಟಪ್ಪ ನಾಯಕ್ – ಕರ್ನಾಟಕ ರಾಜ್ಯ ಉಗ್ರಾಹಣ ನಿಗಮ
  • ಬಿಕೆ ಸಂಗಮೇಶ್ – ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ, ಲ್ಯಾಂಡ್ ಆರ್ಮಿ
  • ಕೆಎಂ ಶಿವಲಿಂಗೇಗೌಡ – ಕರ್ನಾಟಕ ಗೃಹ ಮಂಡಳಿ
  • ಅಬ್ಬಯ್ಯ ಪ್ರಸಾದ್ – ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ
  • ಬಿಕೆ ಗೋಪಾಲಕೃಷ್ಣ ಬೇಳೂರು – ಕರ್ನಾಟಕ
  • ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ
  • ಎಸ್ ಎನ್ ನಾರಾಯಣಸ್ವಾಮಿ – ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಮಕಾಸು ನಿಗಮ ನಿಯಮಿತ
  • ಪಿಎಂ ನರೇಂದ್ರಸ್ವಾಮಿ – ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
  • ಟಿ ರಘುಮೂರ್ತಿ – ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ
  • ಎ ಬಿ ರಮೇಶ್ ಬಂಡಿ ಸಿದ್ದೇಗೌಡ – ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ
  • ಬಿ ಶಿವಣ್ಣ – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
  • ಎಸ್ ಎನ್ ಸುಬ್ಬಾರೆಡ್ಡಿ – ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
  • ವಿನಯ್ ಕುಲಕರ್ಣಿ- ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
  • ಅನಿಲ್ ಚಿಕ್ಕಮಾದು – ಜಂಗಲ್ ಲಾಡ್ಜಸ್
  • ಬಸವನಗೌಡ ದದ್ದಲ್ – ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
  • ಕನೀಜ್ ಫಾತಿಮಾ – ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
  • ಕಾಶಪ್ಪನವರ ವಿಜಯಾನಂದ ಶಿವಶಂಕರಪ್ಪ – ಕರ್ನಾಟಕ ಕ್ರೀಡಾ ಪ್ರಾಧಿಕಾರ
  • ಶ್ರೀನಿವಾಸ ಮಾನೆ – ಉಪಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರು
  • ಟಿಡಿ ರಾಜೇಗೌಡ – ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ
  • ರೂಪಕಲಾ ಎಂ – ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ
Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *