ನವದೆಹಲಿ: ಎಲ್ ಪಿಜಿ ಸಿಲಿಂಡರ್ ಬಳಕೆ ಗ್ರಾಹಕರಿಗೆ ತೈಲ ಕಂಪನಿಗಳು ಶಾಕಿಂಗ್ ನೀಡಿದ್ದು, ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 14 ರೂಪಾಯಿ ಹೆಚ್ಚಳ ಮಾಡಿವೆ.ವಾಣಿಜ್ಯ ಬಳಕೆಯ 19 ಕೆಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಏರಿಕೆಯಾಗಿದ್ದು, ಪರಿಷ್ಕೃತ ದರವು ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಿದೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ 1760.50 ರೂಪಾಯಿಗೆ ಏರಿಕೆ ಆಗಿದೆ.ಕೋಲ್ಕತ್ತದಲ್ಲಿ 1869 ರೂಪಾಯಿನಿಂದ 1887 ರೂಪಾಯಿಗೆ ಏರಿಕೆಯಾಗಿದೆ. ಮುಂಬೈನಲ್ಲಿ 1708 ರೂಪಾಯಿಯಿಂದ 1723 ರೂಪಾಯಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ 1924.70 ರೂಪಾಯಿಯಿಂದ 1937 ರೂಗೆ ಏರಿಕೆಯಾಗಿದೆ. ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಏರಿಕೆ ಆಗಿಲ್ಲ.
ಎಲ್ ಪಿಜಿ ಸಿಲಿಂಡರ್ ಬಳಕೆ ಗ್ರಾಹಕರಿಗೆ ಶಾಕ್; ಪ್ರತಿ ಸಿಲಿಂಡರ್ ದರ 14 ರೂ. ಏರಿಕೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment