ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರ (arecanut rate)ದಲ್ಲಿ ಮತ್ತೆ ಕುಸಿತ ಕಂಡು ಬಂದಿದೆ. ಹಿಂದಿನ ದಿನದ ಮಾರುಕಟ್ಟೆಗೆ ಹೋಲಿಕೆ ಮಾಡಿದ್ರೆ ಯಾವುದೇ 200 ರೂ. ಇಳಿಕೆ ಕಂಡಿದೆ. ಹೊಸ ವರ್ಷ 2024ರ ಆರಂಭದಿಂದಲೂ ಏರಿಮುಖದಲ್ಲಿದ್ದ ಅಡಿಕೆ ದರ ಜ. 15 ರ ನಂತರ ಇಳಿಕೆ ಕಂಡಿತ್ತು. 15 ದಿನದಲ್ಲಿಯೇ 1,500 ರೂ.ಗಳಷ್ಟು ಅಡಿಕೆ ದರ ಇಳಿಕೆಯಾಗಿದೆ. ಈಗಾಗಲೇ ಕೊಯ್ಲು ಸಂಪೂರ್ಣಗೊಂಡಿದ್ದು, ಸ್ವಲ್ಪ ದಿನ ಇಟ್ಟು ಮಾರಾಟ ಮಾಡುವವರಿಗೆ ಮುಂದೆ ಇನ್ನಷ್ಟು ರೇಟ್ ಹೆಚ್ಚಾಗುವ ಸಾಧ್ಯತೆ ಇದೆ. ಇಂದು (ಫೆ.02) ರಾಶಿ ಅಡಿಕೆ ಗರಿಷ್ಠ ಬೆಲೆ ಕ್ವಿಂಟಲ್ ಗೆ 49,000 ರೂಪಾಯಿ ಇದ್ದು, ಕನಿಷ್ಠ ಬೆಲೆ 46,399ರೂ.ಗಳಾಗಿದೆ.
2023ರ ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ ವರ್ಷದಲ್ಲಿಯೇ ಗರಿಷ್ಠ 57 ಸಾವಿರ ತಲುಪಿತ್ತು. ಆಗಸ್ಟ್ ತಿಂಗಳಲ್ಲಿ ಸತತ ಇಳಿಕೆ ಕಂಡು 48 ಸಾವಿರ ತಲುಪಿತ್ತು. ಸೆಪ್ಟೆಂಬರ್ ಮೊದಲ 15 ದಿನ 46 ಸಾವಿರಕ್ಕೆ ಕುಸಿದು ಆತಂಕ ಉಂಟು ಮಾಡಿತ್ತು. ಆದರೆ, ಅಕ್ಟೋಬರ್ ಕೊನೆಯ ವಾರ ಮತ್ತೆ 47,800 ರೂ.ಗೆ ಏರಿಕೆ ಕಂಡಿತ್ತು. ನವೆಂಬರ್ ನಲ್ಲಿ 47 ಸಾವಿರಕ್ಕೆ ತಲುಪಿ ಸ್ಥಿರವಾಗಿತ್ತು. ಡಿಸೆಂಬರ್ ನಲ್ಲಿ 48 ಸಾವಿರ ಗಡಿ ದಾಟಿತ್ತು.ಇದೀಗ 2024 ಜನವರಿ 15ರಂದು 50,500 ರೂಪಾಯಿ ಗಡಿ ತಲುಪಿತ್ತು.
ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಫೆ.2ರಂದು ಪ್ರತಿ ಕ್ವಿಂಟಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 46,399 ರೂ, ಗರಿಷ್ಠ ಬೆಲೆ 49,000 ಹಾಗೂ ಸರಾಸರಿ ಬೆಲೆ 47,964 ರೂ.ಗೆ ಮಾರಾಟವಾಗಿದೆ. ಇನ್ನೂ ಬೆಟ್ಟೆ ಅಡಿಕೆ ಗರಿಷ್ಠ 34,729 ರೂ.ಗೆ ಮಾರಾಟವಾಗುದೆ.



