ಬೆಂಗಳೂರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸಹಾಯಕ ಕಾರ್ಯನಿರ್ವಾಹಕ ಹುದ್ದೆ 223 ಹುದ್ದೆಗೆ ನೇಮಕಾತಿ ನಡೆಯಲಿದೆ.
ಅಧಿಕೃತ ವೆಬ್‌ಸೈಟ್ https://www.ntpc.co.in/ ಮೂಲಕ ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ವಿವಿಧ ವಿಷಯಗಳಲ್ಲಿ ಎಂಜಿನಿಯರಿಂಗ್ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ಫೆಬ್ರವರಿ 8 ಕೊನೆ ದಿನವಾಗಿದೆ.
ಸಾಮಾನ್ಯ ವಿಭಾಗಕ್ಕೆ 98, ಇಡಬ್ಲ್ಯುಎಸ್ ವಿಭಾಗಕ್ಕೆ 22, ಒಬಿಸಿ ವಿಭಾಗಕ್ಕೆ 40, ಎಸ್‌ಸಿ ವಿಭಾಗಕ್ಕೆ 39, ಎಸ್‌ಟಿ ವಿಭಾಗಕ್ಕೆ 24 ಹುದ್ದೆಗಳಿವೆ. ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಿಕಲ್ / ಮೆಕ್ಯಾನಿಕಲ್ ವಿಷಯಗಳಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. 1 ವರ್ಷಗಳ ಕಾರ್ಯಾನುಭವ ಹೊಂದಿರುವುದು ಕಡ್ಡಾಯ. ಸಾಮಾನ್ಯ ಮತ್ತು ಒಬಿಸಿ ವಿಭಾಗದ ಅಭ್ಯರ್ಥಿಗಳು ಪದವಿಯಲ್ಲಿ ಶೇ. 40ರಷ್ಟು ಅಂಕ ಪಡೆದಿರಬೇಕು. ಎಸ್‌ಸಿ / ಎಸ್‌ಟಿ/ ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಪಾಸ್ ಆಗಿರಬೇಕು.
ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸು 35 ವರ್ಷ, ಮೀಸಲಾತಿಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ಇದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಸಾಮಾನ್ಯ/ ಇಡಬ್ಲ್ಯುಎಸ್ / ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಪಾವತಿಸಬೇಕು. ಇದನ್ನು ಆನ್‌ಲೈನ್ / ಆಫ್‌ಲೈನ್ ಮೂಲಕ ಪಾವತಿಸಬಹುದು.
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 55,000 ರೂ. ಮಾಸಿಕ ವೇತನ ದೊರೆಯಲಿದೆ. ಹೆಚ್ಚುವರಿಯಾಗಿ ಎಚ್‌ಆರ್‌ಎ / ನೈಟ್ ಶಿಫ್ಟ್‌ಗೆ ವಸತಿ ಸೌಲಭ್ಯ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್ ವಿಳಾಸ https://www.ntpc.co.in/ಗೆ ಭೇಟಿ ನೀಡಿ.



