Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ದರದಲ್ಲಿ ಭಾರೀ ಕುಸಿತ; 20 ದಿನದಲ್ಲಿ 2,200 ರೂ ಇಳಿಕೆ..!!

IMG 20231230 090141

ದಾವಣಗೆರೆ

ದಾವಣಗೆರೆ: ಅಡಿಕೆ ದರದಲ್ಲಿ ಭಾರೀ ಕುಸಿತ; 20 ದಿನದಲ್ಲಿ 2,200 ರೂ ಇಳಿಕೆ..!!

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರ (arecanut rate)ದಲ್ಲಿ ದಿನದಿಂದ ದಿನಕ್ಕೆ ಕುಸಿತ ಕಾಣುತ್ತಿದೆ. ಇದರಿಂದ ರೈತರಲ್ಲಿ ಆತಂಕ ಉಂಟು ಮಾಡಿದೆ. ಹಿಂದಿನ ದಿನದ ಮಾರುಕಟ್ಟೆಗೆ ಹೋಲಿಕೆ ಮಾಡಿದ್ರೆ ಕ್ವಿಂಟಲ್ ಗೆ 300 ರೂ. ಕುಸಿತ ಕಂಡಿದೆ. ಹೊಸ ವರ್ಷ 2024ರ ಆರಂಭದಿಂದಲೂ ಏರಿಮುಖದಲ್ಲಿದ್ದ ಅಡಿಕೆ ದರ ಜ. 15ರಿಂದ ಕುಸಿತ ಆರಂಭವಾಗಿದ್ದು, ಕಳೆ್ 20 ದಿನದಲ್ಲಿ 2,200 ರೂ.ಗಳಷ್ಟು ಕುಸಿತ ಕಂಡಿದೆ.

ಈಗಾಗಲೇ ಕೊಯ್ಲು ಪೂರ್ಣಗೊಂಡಿದ್ದು, ಸ್ವಲ್ಪ‌ ದಿನ ಇಟ್ಟು ಮಾರಾಟ ಮಾಡುವವರಿಗೆ‌ ಮುಂದೆ ರೇಟ್ ಹೆಚ್ಚಾಗುವ ಸಾಧ್ಯತೆ ಇದೆ. ಫೆ.09‌ ರಂದು ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 48,399 ರೂ.ಗಳಿದ್ದು, ಕನಿಷ್ಠ ಬೆಲೆ 45,599 ರೂ.ಗಳಾಗಿದೆ.

2023ರ ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ ವರ್ಷದಲ್ಲಿಯೇ ಗರಿಷ್ಠ 57 ಸಾವಿರ ತಲುಪಿತ್ತು. ಆಗಸ್ಟ್ ತಿಂಗಳಲ್ಲಿ ಸತತ ಇಳಿಕೆ ಕಂಡು 48 ಸಾವಿರ ತಲುಪಿತ್ತು. ಸೆಪ್ಟೆಂಬರ್‌ ಮೊದಲ 15 ದಿನ ‌46 ಸಾವಿರಕ್ಕೆ ಕುಸಿದು ಆತಂಕ ಉಂಟು ಮಾಡಿತ್ತು. ಆದರೆ, ಅಕ್ಟೋಬರ್ ‌ಕೊನೆಯ ವಾರ ಮತ್ತೆ 47,800 ರೂ.ಗೆ ಏರಿಕೆ ಕಂಡಿತ್ತು. ನವೆಂಬರ್ ನಲ್ಲಿ 47 ಸಾವಿರಕ್ಕೆ ತಲುಪಿ ಸ್ಥಿರವಾಗಿತ್ತು. ಡಿಸೆಂಬರ್ ನಲ್ಲಿ 48 ಸಾವಿರ ಗಡಿ ದಾಟಿತ್ತು.ಇದೀಗ 2024 ಜನವರಿ 15ರಂದು ಗರಿಷ್ಠ ದರ 50,500 ರೂಪಾಯಿ ಗಡಿ ತಲುಪಿತ್ತು. ಫೆಬ್ರವರಿ ತಿಂಗಳಿಂದ ಸತತ ಕುಸಿತ ಕಂಡು ಈಗ 48 ಸಾವಿರ ತಲುಪಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಫೆ.09ರಂದು ಪ್ರತಿ ಕ್ವಿಂಟಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 45,599 ರೂ, ಗರಿಷ್ಠ ಬೆಲೆ 48,399 ಹಾಗೂ ಸರಾಸರಿ ಬೆಲೆ 47,548 ರೂ.ಗೆ ಮಾರಾಟವಾಗಿದೆ. ಇನ್ನೂ ಬೆಟ್ಟೆ ಅಡಿಕೆ ಗರಿಷ್ಠ 35,629 ರೂ‌.ಗೆ ಮಾರಾಟವಾಗಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top