ದಾವಣಗೆರೆ: ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗಾವಕಾಶವನ್ನು ಒದಗಿಸುವ ಸಂಬಂಧ ಈ ಮೇಳವನ್ನು ಆಯೋಜಿಸಲಾಗಿದೆ.
ನೋಂದಾವಣೆಯಾಗಲು ವೆಬ್‍ಸೈಟ್; https;//skillconnect.kaushalkar.com ಮೂಲಕ ನೊಂದಾಯಿಸಿ ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆಯಲು ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ತಿಳಿಸಿದ್ದಾರೆ.