ಡಿವಿಜಿ ಸುದ್ದಿ, ದಾವಣಗೆರೆ: ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್, ವ್ಯಕ್ತಿಯೊಬ್ಬನಿಂದ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ಜಿಲ್ಲೆಯ ಹೊನ್ನಾಳಿ ನಡೆದಿದೆ.
ಪಟ್ಟಣದ ಟಿಬಿ ಸರ್ಕಲ್ ಬಳಿ ಸಾಗರ್ (38) ಹೆಸರಿನ ಬಿಲ್ ಕಲೆಕ್ಟರ್ ದಾನಿಹಳ್ಳಿ ಸಚಿನ್ ಎಂಬುವವರಿಂದ ಇ-ಸ್ವತ್ತು ಕೊಡಲು 3,500 ರೂಪಾಯಿ ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಹಾಕಿಕೊಂಡಿದ್ದಾರೆ.
ಸಾಗರ್ ಅವರು ನ್ಯಾಮತಿ ತಾಲೂಕಿನ ಗಂಗನಕೋಟೆಯಲ್ಲಿ ಬಿಲ್ ಕಲೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಎಸಿಬಿ ಡಿವೈಎಸ್ಪಿ ಪರಮೇಶ್ವರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸಾಗರ್ನನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.